HomeIndiaBREAKING: ತೆಲಂಗಾಣದಲ್ಲಿ ಕಾಂಗ್ರೆಸ್ ಜಯಭೇರಿ; ನಾಳೆ ಶಾಸಕಾಂಗ ಪಕ್ಷದ ಸಭೆ; ಸಂಜೆಯೇ ನೂತನ ಸಿಎಂ ಪ್ರಮಾಣವಚನ...

BREAKING: ತೆಲಂಗಾಣದಲ್ಲಿ ಕಾಂಗ್ರೆಸ್ ಜಯಭೇರಿ; ನಾಳೆ ಶಾಸಕಾಂಗ ಪಕ್ಷದ ಸಭೆ; ಸಂಜೆಯೇ ನೂತನ ಸಿಎಂ ಪ್ರಮಾಣವಚನ ಸಾಧ್ಯತೆ

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದ್ದು, ಈ ಹಿನ್ನೆಲೆಯಲ್ಲಿ ಹಾಲಿ ಸಿಎಂ ಬಿಆರ್ ಎಸ್ ಪಕ್ಷದ ಕೆ.ಚಂದ್ರಶೇಖರ್ ರಾವ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ನಾಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಹೈದರಾಬಾದ್ ನ ಟಿಪಿಸಿಸಿ ಭವನದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಶಾಸಕಾಂಗ ಪಕ್ಷದ ನೂತನ ನಾಯಕನ ಆಯ್ಕೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಸಕಾಂಗ ಪಕ್ಷದ ನಾಯಕನನ್ನಾಗಿ ರೇವಂತ್ ರೆಡ್ಡಿ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ದಟ್ಟವಾಗಿದ್ದು, ನಾಳೆ ಸಂಜೆಯೇ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
RELATED ARTICLES

Most Popular