HomeLive Newsನಾನ್ ವೆಜ್ ಅಡುಗೆ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ: ಗಂಡನನ್ನೇ ಕೊಲೆಗೈದ ಹೆಂಡತಿ

ನಾನ್ ವೆಜ್ ಅಡುಗೆ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ: ಗಂಡನನ್ನೇ ಕೊಲೆಗೈದ ಹೆಂಡತಿ

ಹೈದರಾಬಾದ್: ಪತಿ-ಪತ್ನಿ ನಡುವೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಗಂಡನ ಕೊಲೆಯಲ್ಲಿ ಅಂತ್ಯವಾಗಿದೆ. ಅಡಿಗೆ ವಿಚಾರವಾಗಿ ತಾಳ್ಮೆ ಕಳೆದುಕೊಂಡ ದಂಪತಿ ನಡುವೆ ಗಲಾಟೆ ಆರಂಭವಾಗಿದ್ದು, ಕೋಪದ ಬರದಲ್ಲಿ ಪತ್ನಿ, ಪತಿಯನ್ನೇ ಕೊಲೆಗೈದಿದ್ದಾಳೆ.

ತೆಲಂಗಾಂಣದಲ್ಲಿ ಈ ಘಟನೆ ನಡೆದಿದೆ. ಕೋದಂಡ ಶಿವಾಜಿ ಮೃತ ದುರ್ದೈವಿ. ಕೋದಂಡ ಶಿವಾಜಿ ಮತ್ತು ಲಕ್ಷ್ಮಿ ದಂಪತಿ ತಮ್ಮ ಇಬ್ಬರು ಪುಟ್ಟ ಹೆಣ್ಣುಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಕಳೆದ ಕೆಲವು ತಿಂಗಳುಗಳಿಂದ ಈ ಕುಟುಂಬವು ತೀವ್ರ ಆರ್ಥಿಕ ಸಮಸ್ಯೆ ಎದುರಿಸುತ್ತಿತ್ತು. ಹಣಕಾಸಿನ ತೊಂದರೆಯಿಂದಾಗಿ ದಂಪತಿಗಳ ನಡುವೆ ಪ್ರತಿದಿನ ಜಗಳ, ಗಲಾಟೆಯಾಗುತ್ತಿತ್ತು.

ಪತಿ ಶಿವಾಜಿ ಮನೆಯಲ್ಲಿ ಪತ್ನಿ ಮಾಂಸಾಹಾರದ ಅಡುಗೆ ಮಾಡಿಲ್ಲ ಎಂದು ಕ್ಯಾತೆ ತೆಗೆದಿದ್ದಾನೆ. ಹಣದ ಕೊರತೆಯಿಂದ ಮಾಡಲು ಸಾಧ್ಯವಾಗಿಲ್ಲ ಎಂದು ಪತ್ನಿ ಹೇಳಿದ್ದಾಳೆ. ಇದೇ ವಿಚಾರವಾಗಿ ಲಕ್ಷ್ಮಿ ಮತ್ತು ಶಿವಾಜಿ ನಡುವೆ ಮಾತಿನ ಚಕಮಕಿ ನಡೆದಿದೆ. ಒಂದೆಡೆ ಆರ್ಥಿಕ ಸಂಕಷ್ಟ, ಮತ್ತೊಂದೆಡೆ ಪತಿಯ ಕಾಟ. ಸಾಲದ್ದಕ್ಕೆ ಪತಿಯಿಂದ ಜಗಳ, ಬೈಗುಳ. ಇದರಿಂದ ಕೋಪಗೊಂಡ ಲಕ್ಷ್ಮಿ, ಮನೆಯಲ್ಲಿದ್ದ ಮಚ್ಚಿನಿಂದ ಪತಿ ಶಿವಾಜಿಯ ಕುತ್ತಿಗೆಗೆ ಬಲವಾಗಿ ಹೊಡೆದಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಂಭೀರವಾಗಿ ಹಲ್ಲೆಗೊಳಗಾದ ಶಿವಾಜಿ, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮನೆಯೊಳಗೆ ಕಿರುಚಾಟ, ಅರಚಾಟ ಕೇಳಿ ಅಕ್ಕಪಕ್ಕದ ಮನೆಯವರು ಸ್ಥಳಕ್ಕಾಗಮಿಸಿ ನೋಡಿದಾಗ ಕೊಲೆಯಾಗಿರುವುದು ಕಂಡುಬಂದಿದೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೊಲೆ ಆರೋಪದಲ್ಲಿ ತಾಯಿ ಜೈಲು ಪಾಲಾಗಿದ್ದಾರೆ. ತಂದೆ ಇಹಲೋಕ ತ್ಯಜಿಸಿದ್ದಾರೆ. ಇಬ್ಬರು ಮಕ್ಕಳು ತಂದೆ-ತಾಯಿ ಇಲ್ಲದೇ ಅನಾಥರಾಗಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸ್ ವೃತ್ತ ನಿರೀಕ್ಷಕ ನರಹರಿ ನೇತೃತ್ವದ ತಂಡವು ಲಕ್ಷ್ಮಿಯನ್ನು ವಶಕ್ಕೆ ಪಡೆದಿದೆ. ದಂಪತಿ ನಡುವೆ ಇದ್ದ ದೀರ್ಘಕಾಲದ ಆರ್ಥಿಕ ಸಮಸ್ಯೆಗಳೇ ಈ ಹಿಂಸಾತ್ಮಕ ಕೃತ್ಯಕ್ಕೆ ಪ್ರೇರಣೆಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular