ಬೆಂಗಳೂರು : ಹೃದಯಾಘಾತದ ಸಾವುಗಳ ತಡೆಗೆ ತಾಲೂಕು ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದರು.
ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆ, ಬೆಂಗಳೂರಿನ ಸರ್ ಸಿ.ವಿ.ರಾಮನ್ ನಗರ ಸಾರ್ವಜನಿಕ ಆಸ್ಪತ್ರೆ ಹಾಗೂ ಹೊಸಪೇಟೆ ಆಸ್ಪತ್ರೆಗಳಲ್ಲಿ ಹೃದಯ ರಕ್ತನಾಳಗಳ ಸಂಬಂಧಿತ ಚಿಕಿತ್ಸೆ ನೀಡುವ ಕ್ಯಾತ್ ಲ್ಯಾಬ್ ತೆರೆಯಲಾಗುವುದು. ಗೃಹ ಆರೋಗ್ಯ ಯೋಜನೆಯಡಿ 30 ವರ್ಷ ಮೇಲ್ಪಟ್ಟವರನ್ನು ತಪಾಸಣೆಗೆ ಒಳಪಡಿಸಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿಲ್ಲ. ಹಾಗಾಗಿ ಜನರು ಆತಂಕಪಡುವ ಅಗತ್ಯವಿಲ್ಲ. ಬದಲಾದ ಜೀವನಶೈಲಿ ಹಾಗೂ ಆಹಾರ ಕ್ರಮ ಹೃದಯ ಸಂಬಂಧಿ ಸಮಸ್ಯೆಗಳಿಗೆ ಕಾರಣವಾಗಿದ್ದು, ಜನರಲ್ಲಿ ಜಾಗೃತಿ ಅಗತ್ಯವಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ಹೃದಯಾಘಾತದ ಸಾವುಗಳ ತಡೆಗೆ ತಾಲೂಕು ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆ ಕಲ್ಪಿಸಲಾಗುವುದು. ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆ, ಬೆಂಗಳೂರಿನ ಸರ್ ಸಿ.ವಿ.ರಾಮನ್ ನಗರ ಸಾರ್ವಜನಿಕ ಆಸ್ಪತ್ರೆ ಹಾಗೂ ಹೊಸಪೇಟೆ ಆಸ್ಪತ್ರೆಗಳಲ್ಲಿ ಹೃದಯ ರಕ್ತನಾಳಗಳ ಸಂಬಂಧಿತ ಚಿಕಿತ್ಸೆ ನೀಡುವ ಕ್ಯಾತ್ ಲ್ಯಾಬ್… pic.twitter.com/x5nwbOZIKh
— DIPR Karnataka (@KarnatakaVarthe) August 19, 2025