HomeEntertainmentBREAKING: ಮಾಧ್ಯಮ ಪ್ರತಿನಿಧಿಗಳ ಮೇಲೆ ನಟ ಮೋಹನ್ ಬಾಬು ಹಲ್ಲೆ

BREAKING: ಮಾಧ್ಯಮ ಪ್ರತಿನಿಧಿಗಳ ಮೇಲೆ ನಟ ಮೋಹನ್ ಬಾಬು ಹಲ್ಲೆ

ಹೈದರಾಬಾದ್: ತೆಲುಗು ನಟ ಮೋಹನ್ ಬಾಬು ಹೈದರಾಬಾದ್‌ ನಲ್ಲಿ ಮಾಧ್ಯಮದವರ ಮೇಲೆ ಹಲ್ಲೆ ನಡೆಸಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ನಟ ಮೋಹನ್ ಬಾಬು ಮತ್ತು ಅವರ ಭದ್ರತಾ ಸಿಬ್ಬಂದಿ ಹೈದರಾಬಾದ್‌ನ ಜಲಪಲ್ಲಿಯಲ್ಲಿ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ. ಮೋಹನ್ ಬಾಬು ಅವರ ಕುಟುಂಬಕ್ಕೆ ಸಂಬಂಧಿಸಿದ ವಿವಾದದ ಬಗ್ಗೆ ವರದಿ ಮಾಡಲು ಮಾಧ್ಯಮದವರು ಅಲ್ಲಿಗೆ ಬಂದಿದ್ದು, ಅನಿರೀಕ್ಷಿತವಾಗಿ ದಾಳಿಗೊಳಗಾಗಿದ್ದಾರೆ. ದಾಳಿಕೋರರು ಪತ್ರಕರ್ತರ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದು ಮಾತ್ರವಲ್ಲದೆ ಅವರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಟಿವಿ9 ಮತ್ತು ಟಿವಿ5 ಪ್ರತಿನಿಧಿಗಳಿಗೆ ಗಾಯಗಳಾಗಿವೆ.

ಹಲ್ಲೆಗೊಳಗಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೋಹನ್ ಬಾಬು ಅವರ ನಿವಾಸದಲ್ಲಿ ವರದಿಗಾರರು ಮತ್ತು ವಿಡಿಯೋ ಪತ್ರಕರ್ತರ ಮೇಲೆ ನಡೆದ ಹಲ್ಲೆಯನ್ನು ತೆಲಂಗಾಣ ರಾಜ್ಯ ವಿಡಿಯೋ ಜರ್ನಲಿಸ್ಟ್ ಅಸೋಸಿಯೇಷನ್ ​​ಖಂಡಿಸಿದೆ. ಪೊಲೀಸರು ನಟ ಮೋಹನ್ ಬಾಬು ಮತ್ತು ಅವರ ಪುತ್ರನ ಗನ್ ಜಪ್ತಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular