HomeUncategorizedBIG NEWS: ಭೀಕರ ರಸ್ತೆ ಅಪಘಾತ: ಖ್ಯಾತ ತೆಲುಗು ನಟ ಭರತ್ ಕಾಂತ್ ಸೇರಿ ಇಬ್ಬರು...

BIG NEWS: ಭೀಕರ ರಸ್ತೆ ಅಪಘಾತ: ಖ್ಯಾತ ತೆಲುಗು ನಟ ಭರತ್ ಕಾಂತ್ ಸೇರಿ ಇಬ್ಬರು ದುರ್ಮರಣ

ಹೈದರಾಬಾದ್: ಕಾರು ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೆಲುಗು ಚಿತ್ರರಂಗದ ಖ್ಯಾತ ನಟ ಭರತ್ ಕಾಂತ್ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಹೈದರಾಬಾದ್‌ ನ ಆದಿಬಟ್ಲಾ ಪೊಲೀಸ್ ಠಾಣೆ ವ್ಯಾಪ್ತಿಯ ಹೊರ ವರ್ತುಲ ರಸ್ತೆಯಲ್ಲಿರುವ ನಿರ್ಗಮನ ಸಂಖ್ಯೆ 12ರ ಬಳಿ ತಡರಾತ್ರಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿನಟ ಭರತ್ ಕಾಂತ್ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದು, ಪ್ರಕರಣ ದಾಖಲಿಸಿಕೊಂಡು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದಿಬಟ್ಲಾ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ನಟನ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದ ಬಳಿಕ ಈ ಅಪಘಾತ ಸಂಭವಿಸಿದೆ. ನಾವು ಈ ಸಂಬಂಧ ಪ್ರಕರಣ ದಾಖಲಿಸಿದ್ದೇವೆ, ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಸ್ಥಳಾಂತರಿಸಿದ್ದೇವೆ ಮತ್ತು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಮೃತಪಟ್ಟ ಮತ್ತೋರ್ವ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಭರತ್ ಕಾಂತ್ ತೆಲುಗಿನ ಹಲವು ಸಿನಿಮಾಗಳಲ್ಲಿ, ವೆಬ್ ಸಿರೀಸ್ ಗಳಲ್ಲಿ ಅಭಿನಯಿಸಿದ್ದಾರೆ.

2021 ರಲ್ಲಿ ತೆರೆ ಕಂಡ ಚಲನಚಿತ್ರ ಗ್ರಾಮಂ ಮತ್ತು 2024ರಲ್ಲಿ ಬಿಡುಗಡೆಗೊಂಡ ಟೆನೆಂಟ್ ಭರತ್ ಕಾಂತ್ ಅವರು ನಟಿಸಿದ ಪ್ರಮುಖ ಚಿತ್ರಗಳಾಗಿವೆ. ಗೀತಾಂಜಲಿ ಮತ್ತು ಪಾರ್ವತಿ ಪರಮೇಶ್ವರ್ಲು ಎಂಬ ವೆಬ್ ಸರಣಿಗಳಲ್ಲಿಯೂ ಅಭಿನಯಿಸಿದ್ದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular