HomeKarnatakaBIG NEWS: ತಾಪಮಾನ ಹೆಚ್ಚಳ; ಸನ್ ಸ್ಟ್ರೋಕ್, ಕಾಲರ ಸೋಂಕಿನ ಬಗ್ಗೆ ಆರೋಗ್ಯ ಇಲಾಖೆಯಿಂದ ಎಚ್ಚರಿಕೆ

BIG NEWS: ತಾಪಮಾನ ಹೆಚ್ಚಳ; ಸನ್ ಸ್ಟ್ರೋಕ್, ಕಾಲರ ಸೋಂಕಿನ ಬಗ್ಗೆ ಆರೋಗ್ಯ ಇಲಾಖೆಯಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಒಂದೆಡೆ ಬರಗಾಲ, ಇನ್ನೊಂದೆಡೆ ಕುಡಿಯುವ ನೀರಿಗೂ ತತ್ವಾರ ಶುರುವಾಗಿದೆ. ಈ ನಡುವೆ ರಾಜ್ಯದಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಬಿಸಿಲ ಝಳದಿಂದ ಜನರು ಹೈರಾಣಾಗುತ್ತಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೂ ರಣಬಿಸಿಲು ಆರಂಭವಾಗುತ್ತಿದ್ದು, ಬಿಸಿಲ ಹೊಡೆತಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ 37 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಕಲಬುರ್ಗಿಯಲ್ಲಿ ಅತ್ಯಧಿಕ 42 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಿದ್ದು, ಬಿಸಿಗಾಳಿ ಬೀಸುತ್ತಿದೆ. ರಾಜ್ಯದಲ್ಲಿ ಬಿಸಿಲ ಝಳ ಹೆಚ್ಚುತ್ತಿರುವುದರಿಂದ ಜನರು ಅನಾರೋಗ್ಯಕ್ಕೀಡಾಗುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಂದೆಡೆ ರಣಬಿಸಿಲು, ಬಿಸಿಗಾಳಿ ಇನ್ನೊಂದೆಡೆ ನೀರಿನ ಸಮಸ್ಯೆಯಿಂದಾಗಿ ಕಾಲರಾದಂತಹ ಸೋಂಕು ಕಾಣಿಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಘೋಷಿಸಿದೆ. ಬಿಸಿಗಾಳಿಯಿಂದಾಗಿ ಸನ್ ಸ್ಟ್ರೋಕ್ ಬಗ್ಗೆಯೂ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.

ರಣಬಿಸಿಲಿನಿಂದಾಗಿ ಜನರಲ್ಲಿ ಅತಿಸಾರ, ಡಿಹೈಡ್ರೇಷನ್, ಉಸಿರಾಟದ ಸಮಸ್ಯೆ ಸೇರಿದಂತೆ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳು ಕಂಡುಬರುತ್ತಿವೆ. ಡೆಂಘಿ, ಚಿಕನ್ ಗುನ್ಯಾ ರೋಗವು ಹೆಚ್ಚುತ್ತಿದೆ. ಕಳೆದ ಮೂರು ತಿಂಗಳಲ್ಲಿ 1663 ಡೆಂಘಿ ಪ್ರಕರಣ ಪತ್ತೆಯಾಗಿದ್ದು, ಅವುಗಳಲ್ಲಿ ಬೆಂಗಳೂರಿನಲ್ಲಿಯೇ 535 ಪ್ರಕರಣಗಳು ದಾಖಲಾಗಿವೆ. ಬಿಸಿಲ ಝಳ, ನೀರಿನ ಸಮಸ್ಯೆಗಳ ಜೊತೆಗೆ ಆರೋಗ್ಯ ಸಮಸ್ಯೆಗಳು ಕಾಡುತ್ತಿದ್ದು ಜನರು ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular