HomeKarnatakaರಾಜಧಾನಿ ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮುಂದಿನ 5 ದಿನ ಉಷ್ಣಾಂಶ ಏರಿಕೆ ಮುನ್ಸೂಚನೆ

ರಾಜಧಾನಿ ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮುಂದಿನ 5 ದಿನ ಉಷ್ಣಾಂಶ ಏರಿಕೆ ಮುನ್ಸೂಚನೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್ 14 ರಿಂದ 18ರವರೆಗೆ ಕರಾವಳಿ ಕರ್ನಾಟಕ ಪ್ರದೇಶದಲ್ಲಿ ಬಿಸಿ ಮತ್ತು ತೇವಾಂಶದ ವಾತಾವರಣ ಇರುವ ಸಾಧ್ಯತೆ ಇದೆ. ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬಿಸಿ ಗಾಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಏಪ್ರಿಲ್ 15 ರಂದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಕಡೆ ಬಿಸಿ ಮತ್ತು ತೇವಾಂಶದೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆಯೊಂದಿಗೆ ಬಿಸಿ ವಾತಾವರಣ ಮುಂದುವರೆಯುತ್ತದೆ. ಧಾರವಾಡ, ಬೆಳಗಾವಿ, ರಾಯಚೂರು, ಹಾವೇರಿ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಹಗುರ ಮಳೆ ಆಗುವ ಸಂಭವ ಇದೆ. ವಿಜಯಪುರ, ಬೀದರ್, ಬಾಗಲಕೋಟೆ, ಕಲಬುರಗಿ, ಕೊಪ್ಪಳ, ಗದಗ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಉಷ್ಣ ಮಾರುತದ ವಾತಾವರಣ ಇರುವ ಸಾಧ್ಯತೆ ಇದೆ. ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಕೆಲವು ಕಡೆ ಬಿರುಗಾಳಿಯೊಂದಿಗೆ ಹಗುರ ಸಾಧಾರಣ ಮಳೆ ಆಗಲಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏ. 16ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಮುಂದುವರೆಯಲಿದೆ. ಉತ್ತರ ಒಳನಾಡಿನ ರಾಯಚೂರು, ಧಾರವಾಡ, ಬೆಳಗಾವಿ, ಹಾವೇರಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಬಿಸಿ ಗಾಳಿ ಉಷ್ಣಾಂಶದ ವಾತಾವರಣ ಇರಲಿದೆ. ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯುತ್ತದೆ.

ಏಪ್ರಿಲ್ 17ರಂದು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಭಾಗದಲ್ಲಿ ಬಿಸಿ ಗಾಳಿ ಮುಂದುವರೆಯಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ವಾತಾವರಣ ಇರುತ್ತದೆ. ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರದಿಂದ ಸಾಧಾರಣ ಮಳೆ ಆಗಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹಗುರ ಮಳೆ ಆಗುವ ಸಂಭವ ಇದ್ದು, ಉಳಿದೆಡೆ ಮುಂದುವರೆಯಲಿದೆ.

ಏಪ್ರಿಲ್ 18ರಂದು ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ ಜಿಲ್ಲೆಗಳಲ್ಲಿ ಉಷ್ಣ ವಾತಾವರಣ ಹೆಚ್ಚಾಗಿರುತ್ತದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular