ರಾಜ್ಯದಲ್ಲಿ ವಾಡಿಕೆಗಿಂತ 3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಹೆಚ್ಚಳ : ಬಿಸಿಲಿನ ಬೇಗೆಗೆ ಜನರು ತತ್ತರ

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು, 3 ಡಿಗ್ರಿ ಸೆಲ್ಸಿಯಸ್‌ಗಿಂತ ಗರಿಷ್ಠ ಉಷ್ಣಾಂಶ ಏರಿಕೆಯಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಡಿಕೆ ಪ್ರಮಾಣಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್‌ಗಿಂತ ಗರಿಷ್ಠ ಉಷ್ಣಾಂಶ ಏರಿಕೆಯಾಗಿದೆ. ಗುರುವಾರ ಬಾದಾಮಿಯಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಇದು ವಾಡಿಕೆ ಪ್ರಮಾಣಕ್ಕಿಂತ 3 ಡಿಗ್ರಿ ಸೆಲ್ಸಿಯಸ್ ಹೆಚ್ಚು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನು ರಾಜ್ಯದ  ಮಂಡ್ಯ 35.6 ಡಿಗ್ರಿ ಉಷ್ಣಾಂಶ, ಬೆಂಗಳೂರಿನಲ್ಲಿ 34.4 ಡಿಗ್ರಿ ಉಷ್ಣಾಂಶ ದಾಖಲಾಗಿದ್ದು, ವಾಡಿಕೆ ಪ್ರಮಾಣಕ್ಕಿಂತ ತಲಾ 3 ಡಿಗ್ರಿ ಸೆಲ್ಸಿಯಸ್ ನಷ್ಟು ಗರಿಷ್ಠ ಉಷ್ಣಾಂಶದಲ್ಲಿ ಹೆಚ್ಚಳವಾಗಿದೆ.

ಬಾಗಲ ಕೋಟೆ, ಧಾರಾವಾಡ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶವೂ ವಾಡಿಕೆ ಪ್ರಮಾಣಕ್ಕಿಂತ ತಲಾ 2 ಡಿಗ್ರಿ ಸೆಲ್ಸಿಯಸ್ ನಷ್ಟು ಏರಿಕೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read