ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನವು ಗಣನೀಯವಾಗಿ ಏರಿಕೆಯಾಗಿದ್ದು, 11 ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ತಲುಪಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ವರದಿ ಮಾಡಿದೆ.
ರಾಜ್ಯದ ರಾಯಚೂರಿನ ಕಲ್ಲೂರಿನಲ್ಲಿ ಗರಿಷ್ಠ 41 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಕಲಬುರಗಿಯ ಏಳು ಹೋಬಳಿಗಳು, ರಾಯಚೂರು, ಉತ್ತರ ಕನ್ನಡ, ಧಾರವಾಡ, ವಿಜಯಪುರ ಮತ್ತು ಬಾಗಲಕೋಟೆಯ ತಲಾ ಒಂದು ಹೋಬಳಿಯಲ್ಲಿ 40 ಡಿಗ್ರಿ ಸೆಲ್ಸಿಯಸ್ ತಲುಪಿದೆ.
ರಾಜ್ಯದ 11 ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ತಿಳಿಸಿದೆ.