HomeKarnatakaSHOCKING: ದೇವಸ್ಥಾನದಲ್ಲಿ ಭಜನೆ ಮಾಡುವಾಗಲೇ ಕಿಟಕಿಯಿಂದ ಕೈ ಹಾಕಿ ಮಹಿಳೆ ಸರ ಎಗರಿಸಿದ ಕಳ್ಳ

SHOCKING: ದೇವಸ್ಥಾನದಲ್ಲಿ ಭಜನೆ ಮಾಡುವಾಗಲೇ ಕಿಟಕಿಯಿಂದ ಕೈ ಹಾಕಿ ಮಹಿಳೆ ಸರ ಎಗರಿಸಿದ ಕಳ್ಳ

ಬೆಂಗಳೂರು: ದೇವಸ್ಥಾನದಲ್ಲಿ ಭಜನೆ ಮಾಡುವಾಗಲೇ ಕಿಟಕಿಯಿಂದ ಕೈ ಹಾಕಿದ ಕಳ್ಳ ಮಹಿಳೆಯ ಸರ ಎಗರಿಸಿದ ಆಘಾತಕಾರಿ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ನ ಶಂಕರಪುರದ ವಿನಾಯಕ ದೇವಸ್ಥಾನದಲ್ಲಿ ನಡೆದಿದೆ.

ದೇವಾಲಯದಲ್ಲಿ ಮಹಿಳೆಯರು ಭಜನೆ ಮಾಡುವಾಗಲೇ ಈ ಘಟನೆ ನಡೆದಿದೆ. ಕಿಟಕಿ ಬಳಿ ಕುಳಿತಿದ್ದ ಮಹಿಳೆ ಭಜನೆ ಮಾಡುತ್ತಿದ್ದ ವೇಳೆಯಲ್ಲಿ ಕಿಟಕಿಯಿಂದ ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಮಾಂಗಲ್ಯ ಸರ ಕಸಿದುಕೊಂಡು ಕಳ್ಳ ಪರಾರಿಯಾಗಿದ್ದಾನೆ. ಈ ವೇಳೆ ಮಹಿಳೆ ಜೋರಾಗಿ ಕಿರುಚಾಡಿದ್ದು, ಭಜನೆ ಮಾಡುತ್ತಿದ್ದವರೆಲ್ಲ ಹೊರಬಂದು ಕಳ್ಳನನ್ನು ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ, ಈ ವೇಳೆಗಾಗಲೇ 30 ಗ್ರಾಂ ಸರ ಕಸಿದು ಕಳ್ಳ ಪರಾರಿಯಾಗಿದ್ದಾನೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಳ್ಳನ ಪತ್ತೆಗೆ ಬಲೆ ಬೀಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular