HomeKarnatakaದೇವಾಲಯಕ್ಕೆ ಬಂದ ಬಾಲಕಿ ಜತೆ ಅಸಭ್ಯ ವರ್ತನೆ: ಅರ್ಚಕ ಅರೆಸ್ಟ್

ದೇವಾಲಯಕ್ಕೆ ಬಂದ ಬಾಲಕಿ ಜತೆ ಅಸಭ್ಯ ವರ್ತನೆ: ಅರ್ಚಕ ಅರೆಸ್ಟ್

ಬೆಂಗಳೂರು: ದೇವಾಲಯಕ್ಕೆ ಬಂದಿದ್ದ 7 ವರ್ಷದ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಅರ್ಚಕನನ್ನು ವಿದ್ಯಾರಣ್ಯಪುರ ಠಾಣೆ ಪೋಲೀಸರು ಬಂಧಿಸಿದ್ದಾರೆ.

ವಿದ್ಯಾರಣ್ಯಪುರ ಸಮೀಪದ ದೇವಾಲಯದ ಅರ್ಚಕ ಪ್ರಕಾಶ್ ಆರಾಧ್ಯ ಬಂಧಿತ ಆರೋಪಿ ಎರಡು ದಿನಗಳ ಹಿಂದೆ ಅಪ್ರಾಪ್ತ ಅಸಭ್ಯವಾಗಿ ವರ್ತಿಸಿದ್ದ ಬಗ್ಗೆ ಪೋಷಕರು ದೂರು ನೀಡಿದ್ದರು. ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ.

ಅನೇಕ ದಿನಗಳಿಂದ ನಗರದಲ್ಲಿ ಬೀದರ್ ಜಿಲ್ಲೆಯ ಬಾಲಕಿಯ ಪೋಷಕರು ನೆಲೆಸಿದ್ದಾರೆ. ಮನೆ ಸಮೀಪದ ದೇವಾಲಯಕ್ಕೆ ಬಾಲಕಿ ತೆರಳಿದ್ದಾಗ ಕೃತ್ಯ ನಡೆದಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular