HomeIndiaBREAKING: ಶ್ರೀಕ್ಷೇತ್ರ ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ: ಕಣ್ತುಂಬಿಕೊಂಡು ಭಾವಪರವಶರಾದ ಭಕ್ತರು

BREAKING: ಶ್ರೀಕ್ಷೇತ್ರ ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ: ಕಣ್ತುಂಬಿಕೊಂಡು ಭಾವಪರವಶರಾದ ಭಕ್ತರು

ತಿರುವನಂತಪುರಂ: ಕೇರಳದ ಪಟ್ಟಣಂತಿಟ್ಟ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನವಾಗಿದ್ದು, ಅಯ್ಯಪ್ಪ ಸ್ವಾಮಿ ಭಕ್ತರು ಮಕರ ಜ್ಯೋತಿಯನ್ನು ಕಣ್ತುಂಬಿಕೊಂಡಿದ್ದಾರೆ,

ಕೇರಳದ ಪೊನ್ನಂಬಲಮೇಡುವಿನ ಬೆಟ್ಟದಲ್ಲಿ ಮಕರ ಜ್ಯೋತಿ ಗೋಚರಿಸಿದೆ. ಬೆಟ್ಟದಲ್ಲಿ ಜ್ಯೋತಿ ಸ್ವರೂಪದಲ್ಲಿ ಮಣಿಕಂಠ ಗೋಚರಿಸಿದ್ದು, ಅಯ್ಯಪ್ಪ ಸ್ವಾಮಿ ಭಕ್ತರು ಮಕರ ಜ್ಯೋತಿಯನ್ನು ಕಣ್ತುಂಬಿಕೊಂಡು ಭಾವಪರವಶರಾಗಿದ್ದಾರೆ.

ಪಂದಳದಿಂದ ಅಯ್ಯಪ್ಪಸ್ವಾಮಿ ಸನ್ನಿಧಿಗೆ ಆಭರಣ ತಂದು ದೇವಾಲಯದಲ್ಲಿ ವಿಶೇಷ ಅಲಂಕಾರ, ಪೂಜೆ ನೆರವೇರಿಸಲಾಗಿದೆ. ಗರುಡ ದರ್ಶನವಾಗಿದ್ದು, ಇದರ ಜೊತೆಗೆ ಪೊನ್ನಂಬಲಮೇಡುವಿನ ಬೆಟ್ಟದಲ್ಲಿ ಮಕರ ಜ್ಯೋತಿ ದರ್ಶನವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಕರ ಸಂಕ್ರಾಂತಿ ಅಂಗವಾಗಿ ಅಯ್ಯಪ್ಪಸ್ವಾಮಿಗೆ ವಿಶೇಷ ಅಲಂಕಾರ ಪೂಜೆ ನೆರವೇರಿಸಲಾಗಿದೆ. ಅಪಾರ ಸಂಖ್ಯೆಯ ಭಕ್ತರು ಮಕರ ಜ್ಯೋತಿಯ ದರ್ಶನ ಪಡೆದಿದ್ದಾರೆ. ಸ್ವಾಮಿಯೇ ಶರಣಂ ಅಯ್ಯಪ್ಪ ಘೋಷಣೆ ಮುಗಿಲು ಮುಟ್ಟಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular