ಬೆಂಗಳೂರು: ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಮುಜರಾಯಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ನೀರಿನ ಬಾಟಲ್, ಕವರ್ ಸೇರಿದಂತೆ ಯಾವುದೇ ರೀತಿಯ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವಂತಿಲ್ಲ. ಪ್ಲಾಸ್ಟಿಕ್ ಬ್ಯಾನ್ ಮಾಡಲಾಗಿದೆ ಎಂದರು.
ಈಗಾಗಲೇ ಪ್ಲಾಸ್ಟಿಕ್ ತೆಗೆದುಕೊಂಡಿದ್ದರೆ ಅವುಗಳನ್ನು ಎರಡು ತಿಂಗಳ ಒಳಗಾಗಿ ಖಾಲಿ ಮಾಡಬೇಕು. ನಿಯಮ ಜಾರಿಗೆ ಎರಡು ತಿಂಗಳ ಕಾಲಾವಕಾಶವಿದೆ. ಆಗಸ್ಟ್ 15ರಿಂದ ಯಾವುದೇ ಕಾರಣಕ್ಕೂ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ ಎಂದು ತಿಳಿಸಿದರು.