BREAKING: ಛತ್ತೀಸ್‌ ಗಢದಲ್ಲಿ ಭೀಕರ ಅಪಘಾತ: 10 ಜನ ಸಾವು

ರಾಯ್‌ ಪುರ: ಛತ್ತೀಸ್‌ಗಢದ ರಾಯ್‌ಪುರ-ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಟ್ರೇಲರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಹತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ರಾಯ್‌ಪುರ-ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ, ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಚೌಥಿಯಾ ಛಟ್ಟಿಯಿಂದ ಹಿಂತಿರುಗುತ್ತಿದ್ದಾಗ, ಜನರಿಂದ ತುಂಬಿದ್ದ ಸಣ್ಣ ಟ್ರಕ್ ಟ್ರೇಲರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸುಮಾರು 10 ಜನರು ಸಾವನ್ನಪ್ಪಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದು, ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಯ್‌ ಪುರ ಎಸ್‌ಪಿ ಲಾಲ್ ಉಮ್ಮದ್ ಸಿಂಗ್ ತಿಳಿಸಿದ್ದಾರೆ.

ಅಪಘಾತದಲ್ಲಿ ಇನ್ನೂ ಹಲವರು ಗಾಯಗೊಂಡರು. ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ರಾಯ್‌ಪುರದ ಅಂಬೇಡ್ಕರ್ ಸ್ಮಾರಕ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read