HomeKarnatakaBREAKING NEWS: ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷರ ಅವಧಿ 1 ತಿಂಗಳು ವಿಸ್ತರಣೆ, ಕುತೂಹಲ ಮೂಡಿಸಿದ...

BREAKING NEWS: ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷರ ಅವಧಿ 1 ತಿಂಗಳು ವಿಸ್ತರಣೆ, ಕುತೂಹಲ ಮೂಡಿಸಿದ ಸರ್ಕಾರದ ನಡೆ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅವಧಿ ಮತ್ತೆ ವಿಸ್ತರಣೆ ಮಾಡಲಾಗಿದೆ. ಇದರೊಂದಿಗೆ ರಾಜ್ಯ ಸರ್ಕಾರ ನಡೆ ಕುತೂಹಲಕ್ಕೆ ಕಾರಣವಾಗಿದೆ.

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅವಧಿಯನ್ನು ಎರಡನೇ ಬಾರಿಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಫೆಬ್ರವರಿ 29ರ ವರೆಗೆ ಅಧ್ಯಕ್ಷರ ಅವಧಿ ವಿಸ್ತರಣೆ ಮಾಡಲಾಗಿದೆ. ಈ ಹಿಂದೆ ಜನವರಿ 31ರವರೆಗೆ ಜಯಪ್ರಕಾಶ್ ಹೆಗಡೆ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅವಧಿಯನ್ನು ವಿಸ್ತರಿಸಲಾಗಿತ್ತು. ಈಗ ಮತ್ತೆ ಒಂದು ತಿಂಗಳ ಅವಧಿಗೆ ವಿಸ್ತರಿಸಿದೆ.

ಹಿಂದುಳಿದ ವರ್ಗಗಳ ಆಯೋಗದ ವರದಿ ಸ್ವೀಕರಿಸುವ ವಿಚಾರವಾಗಿ ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದು, ಇದೇ ಸಂದರ್ಭದಲ್ಲಿ ಅವಧಿ ವಿಸ್ತರಿಸುವ ಸರ್ಕಾರದ ನಡೆ ಕುತೂಹಲ ಮೂಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ನವಂಬರ್ ನಲ್ಲೇ ಜಯಪ್ರಕಾಶ್ ಹೆಗಡೆ ಅವರ ಅಧಿಕಾರದ ಅವಧಿ ಪೂರ್ಣಗೊಂಡಿತ್ತು. ಜನವರಿ 31ರವರೆಗೂ ಸರ್ಕಾರ ವಿಸ್ತರಿಸಿತ್ತು. ಈಗ ಆಯೋಗದಿಂದ ವರದಿ ಸ್ವೀಕರಿಸುವ ಹಿನ್ನೆಲೆಯಲ್ಲಿ ಫೆಬ್ರವರಿ 29ರವರೆಗೂ ವಿಸ್ತರಿಸಲಾಗಿದೆ. ಚಿತ್ರದುರ್ಗದಲ್ಲಿ ಇತ್ತೀಚೆಗೆ ನಡೆದ ಶೋಷಿತ ವರ್ಗದ ಜಾಗೃತಿ ಸಮಾವೇಶದಲ್ಲಿ ಕಾಂತರಾಜು ವರದಿ ಸ್ವೀಕರಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular