ಶಿಕಾರಿಪುರ ತೋಟಗಾರಿಕೆ ಇಲಾಖೆಯು 2026-27 ರಿಂದ 2028-29ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಅಡಿಕೆ, ಶುಂಠಿ, ಕಾಳುಮೆಣಸು ಮತ್ತು ಮಾವು ಬೆಳೆಗಳ ಉದ್ದೇಶಿತ ಕರಡು ಟರ್ಮ್ ಶೀಟ್ ತಯಾರಿಸಿದ್ದು, ಟರ್ಮ್ ಶೀಟ್ ಉತ್ತಮಗೊಳಿಸಲು ರೈತರಿಂದ ಸಲಹೆಗಳನ್ನು ಆಹ್ವಾನಿಸಿದೆ.
ರೈತರು ತಮ್ಮ ಸಲಹೆಗಳನ್ನು ಏ. 27 ರೊಳಗಾಗಿ ಲಿಖಿತ ರೂಪದಲ್ಲಿ ಕಚೇರಿಗೆ ಸಲ್ಲಿಸುವಂತೆ ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಮಾಸ್ಟರ್ ಆಫ್ ವಿಜ್ಯುವಲ್ ಆರ್ಟ್ಸ್ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಆನ್ಲೈನ್ ಅರ್ಜಿ ಆಹ್ವಾನ
ಶಿವಮೊಗ್ಗ : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಶಾಶ್ವತ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಮಾಸ್ಟರ್ ಆಫ್ ವಿಜುಯಲ್ ಆರ್ಟ್ಸ್ ನಾಲ್ಕು ಶೈಕ್ಷಣಿಕ ವರ್ಷದ ಎಂಟು ಸೆಮಿಸ್ಟರ್ಗಳ ರಾಷ್ಟ್ರೀಯ ಶಿಕ್ಷಣ ಪದ್ದತಿಯ ದೃಶ್ಯ ಕಲೆಯಲ್ಲಿ 2026-27 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಬಿ.ವಿ.ಎ. ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿ.ಯು.ಸಿ.ಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಹಾಗೂ ದ್ವಿತೀಯ ಪಿ.ಯು.ಸಿ.ಗೆ ಸಮಾನಾಂತರ ಕೋರ್ಸು ಮಾಡಿರುವ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಈ ಪದವಿಯಲ್ಲಿ 3ನೇ ಸೆಮಿಸ್ಟರ್ ನಿಂದ ಚಿತ್ರಕಲೆ, ಗ್ರಾಫಿಕ್ಸ್ ಕಲೆ, ಶಿಲ್ಪಕಲೆ, ಅನ್ವಯಕಲೆ, ಕಲಾ ಇತಿಹಾಸ ಮತ್ತು ಛಾಯಾಚಿತ್ರ ಹಾಗೂ ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಜಾಲತಾಣ https://uucms.karnataka.gov.in ಅಥವಾ https:// www.cavamysore.karantaka.gov.in ಮೂಲಕ ಮೇ 30ರೊಳಗಾಗಿ ಸಲ್ಲಿಸುವುದು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಅರ್ಹತಾ ಪರೀಕ್ಷೆ ಹಾಗೂ ವೈಯುಕ್ತಿಕ ಸಂದರ್ಶನದ ದಿನಾಂಕವನ್ನು ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಈ ಕಾರ್ಯಾಲಯದ ದೂರವಾಣಿ ಸಂಖ್ಯೆ 0821-2438931 ನ್ನು ಸಂಪರ್ಕಿಸುವಂತೆ ಕಾಲೇಜಿನ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

