ತುಮಕೂರು : ಕ್ಯಾಂಟರ್ ಲಾರಿ -ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ತಾಯಿ-ಮಗಳು ಸಾವನ್ನಪ್ಪಿದ ಘಟನೆ ತುಮಕೂರು ನಗರದ ಬಂಡಿಮನೆ ಕಲ್ಯಾಣ ಮಂಟಪದ ಬಳಿ ನಡೆದಿದೆ.
ಮೃತರನ್ನು ತಾಯಿ ಶಾಂತಲಕ್ಷ್ಮೀ (30) ಹಾಗೂ ಮಗಳು ಚಿನ್ಮಯಿ (5) ಎಂದು ಗುರುತಿಸಲಾಗಿದೆ. ಸಂಬಂಧಿಕರ ಮದುವೆ ಮುಗಿಸಿ ಆಟೋದಲ್ಲಿ ಬರುತ್ತಿದ್ದ ವೇಳೆ ಎದುರಿನಿಂದ ಬಂದ ಕ್ಯಾಂಟರ್ ಲಾರಿಯ ಬ್ರೇಕ್ ಕಟ್ ಆಗಿ ಆಟೋ ಡಿಕ್ಕಿ ಹೊಡೆದಿದೆ. ಪರಿಣಾಮ ತಾಯಿ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಆಟೋ ಚಾಲಕ ಗಿರೀಶ್ ಹಾಗೂ ಗಾಯಾಳು ತನ್ಮಯ್ ಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ತುಮಕೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You Might Also Like
TAGGED:accident in tumakuru