ಕಾರು, ಟಾಟಾ ಏಸ್ ನಡುವೆ ಭೀಕರ ಅಪಘಾತ : ಓರ್ವ ಸಾವು, ಮತ್ತೋರ್ವ ಗಂಭೀರ

ಚಿಕ್ಕಬಳ್ಳಾಪುರ : ಕಾರು, ಟಾಟಾ ಏಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ತಾಂಡಾ ಬಳಿ ಘಟನೆ ಸಂಭವಿಸಿದೆ. ಮೃತರನ್ನು ಕಾರಿನಲ್ಲಿದ್ದ ಬೆಂಗಳೂರಿನ ಬಗಲಗುಂಟೆ ನಿವಾಸಿ ಶಿವಕುಮಾರ್ (32 )ಎಂದು ಗುರುತಿಸಲಾಗಿದೆ. . ಕಾರಿನಲ್ಲಿದ್ದ ಮತ್ತೋರ್ವ ಅನಂತರಾಮ್ (37) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತ ಸಂಭವಿಸುತ್ತಿದ್ದಂತೆ ಟಾಟಾ ಏಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು,ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read