ಡಿಜಿಟಲ್ ಡೆಸ್ಕ್ : ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಟಾಟಾ ಏಸ್ ಟ್ರಕ್ ನಡುವೆ ಭೀಕರವಾದ ಅಪಘಾತ ಸಂಭವಿಸಿದೆ.
ಘಟನೆಯ ಭಯಾನಕ ವಿಡಿಯೋ ವೈರಲ್ ಆಗಿದ್ದು, ಬೆಚ್ಚಿ ಬೀಳಿಸುವಂತಿದೆ. ಅದೃಷ್ಟವಶಾತ್ ಟಾಟಾ ಏಸ್ ವಾಹನದ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.
ವೇಗವಾಗಿ ಹೋಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಗೆ ಟಾಟಾ ಏಸ್ ವಾಹನ ಅಡ್ಡವಾಗಿ ಬಂದು ಡಿಕ್ಕಿ ಹೊಡೆದಿದೆ. ಬಸ್ ಚಾಲಕ ಸಡನ್ ಆಗಿ ಬ್ರೇಕ್ ಹೊಡೆದಿದ್ದರಿಂದ ಭಾರಿ ದುರಂತ ತಪ್ಪಿದೆ. ಕಾರಿನ ಡ್ಯಾಷ್ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಕೆಎಸ್ ಆರ್ ಟಿ ಸಿ ಬಸ್ ಮುಂದೆ ಬಂದು ಟಾಟಾ ಏಸ್ ಪಲ್ಟಿಯಾಗಿದೆ. ನಜ್ಜುಗುಜ್ಜಾದ ವಾಹನದಿಂದ ಚಾಲಕ ಹೊರಬರುತ್ತಿರುವ ದೃಶ್ಯವನ್ನು ನೀವು ನೋಡಬಹುದು.
A post shared by Bengaluru Diaries Official (@bengaluru_diaries_)