BREAKING : ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ : ಕಾರು ಬಾವಿಗೆ ಉರುಳಿ ಬಿದ್ದು ಚಿಕ್ಕಬಳ್ಳಾಪುರ ಮೂಲದ ಮೂವರು ಸಾವು.!

ಡಿಜಿಟಲ್ ಡೆಸ್ಕ್ : ಆಂಧ್ರ ಪ್ರದೇಶದಲ್ಲಿ ಕಾರು ಬಾವಿಗೆ ಉರುಳಿ ಬಿದ್ದಿದ್ದು, ಈ ಘಟನೆಯಲ್ಲಿ ಚಿಕ್ಕಬಳ್ಳಾಪುರ ಮೂಲದ ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆ ಆಂಧ್ರದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ ಗ್ರಾಮದ ಬಳಿ ನಡೆದಿದೆ.

ಮೃತರನ್ನು ಚಿಂತಾಮಣಿ ತಾಲೂಕಿನ ಮುತ್ತಕದಲ್ಲಿ ಗ್ರಾಮದ ನಿವಾಸಿಗಳಾದ ಲೊಕೇಶ(34), ಚಂದನಹಳ್ಳಿ ಗ್ರಾಮದ ಶಿವಾನಂದ, ಕೋಲಾರ ಜಿಲ್ಲೆಯ ಸುಗಟೂರು ಗ್ರಾಮದ ಚಲಪತಿ ಎಂದು ಗುರುತಿಸಲಾಗಿದೆ. ಇನ್ನು ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾದಿಂದ ಪಾರಾಗಿದ್ದಾರೆ.

ಅಡುಗೆ ಕೆಲಸಕ್ಕೆಂದು ಕಾರಿನಲ್ಲಿ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. . ಆ ವೇಳೆ ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ ಗ್ರಾಮದ ಬಳಿಯ ಬಾವಿಗೆ ಕಾರು ಬಿದ್ದಿದೆ. ಪಿಲೇರು ಪೊಲೀಸ್ ಠಾಣೆ ವ್ಯಾಪ್ತಿ ಈ ಪ್ರಕರಣ ಸಂಭವಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read