BREAKING : ಬೆಂಗಳೂರಲ್ಲಿ ಭೀಕರ ಅಪಘಾತ :  ಆಟೋಗೆ ‘KSRTC’ ಬಸ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು.!

ಬೆಂಗಳೂರು : ಬೆಂಗಳೂರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಆಟೋಗೆ ‘KSRTC’ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಉಳಿದ ಮೂವರಿಗೆ ಗಂಭೀರ ಗಾಯಗಳಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಲ್ಲರಬಾಣವಾಡಿಯಲ್ಲಿ ಈ ಘಟನೆ ನಡೆದಿದೆ. ಆಟೋ ಯೂಟರ್ನ್ ತೆಗೆದುಕೊಳ್ಳುವಾಗ ‘KSRTC’ ಬಸ್ ಡಿಕ್ಕಿಯಾಗಿದೆ.

ಮೃತರನ್ನು ಯಂಟಾಗನಹಳ್ಳಿ ಗ್ರಾಮ ಪಂಚಾಯಿತಿಯ ವಾಟರ್ ಮ್ಯಾನ್ ಶ್ರೀನಿವಾಸ್ , ವರ್ಷಿಣಿ (13)
ಪುಟ್ಟಮ್ಮ (55) ಎಂದು ಗುರುತಿಸಲಾಗಿದೆ. ಮೃತರು ಶಾಂತಿನಗರ ಗ್ರಾಮದ ನಿವಾಸಿಗಳು . ಆಟೋದಲ್ಲಿದ್ದ ಲೇಖನ ಎಂಬುವವರ ಸ್ಥಿತಿ ಗಂಭೀರವಾಗಿದೆ. ಆಟೋದಲ್ಲಿ ಒಟ್ಟು 6 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಹಿನ್ನೆಲೆ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read