ಚಿತ್ರದುರ್ಗ : ಡಿವೈಡರ್ ಗೆ ಇನ್ನೋವಾ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಇನ್ನೋವಾ ಕಾರಿನ ಟೈರ್ ಸ್ಪೋಟಗೊಂಡು ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಚಿತ್ರದುರ್ಗ ಹೊರವಲಯದ ಸೀಬಾರದ ಗೋಶಾಲೆ ಬಳಿ ಈ ಘಟನೆ ಸಂಭವಿಸಿದೆ.
ಮೃತರನ್ನು ತಮಿಳುನಾಡು ಮೂಲದ ಅರ್ಜುನ್ (28) ಸರವಣ್ (30) ಶ್ರೀದರ್ (30) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 6 ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿತ್ರದುರ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ತಮಿಳುನಾಡಿನ ಕೃಷ್ಣಗಿರಿಯಿಂದ ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You Might Also Like
TAGGED:ಚಿತ್ರದುರ್ಗ