ತುಮಕೂರು : ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಶಿರಾದಲ್ಲಿ ನಡೆದಿದೆ.
ಶಿರಾದ ಸಾಯಿ ಡಾಬಾ ಬಳಿ ಈ ಘಟನೆ ನಡೆದಿದೆ. ಹೊಂಡಾ ಆ್ಯಕ್ಟೀವಾ ಹಾಗೂ ಇನ್ನೊಂದು ಬೈಕ್ ಗಳ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.