HomeKarnatakaBREAKING : ಮಾಗಡಿ ರಸ್ತೆಯಲ್ಲಿ ಭೀಕರ ಅಪಘಾತ : ಮಹಿಳೆ ಮೇಲೆ ಶಾಲಾ ಬಸ್ ಹರಿದು...

BREAKING : ಮಾಗಡಿ ರಸ್ತೆಯಲ್ಲಿ ಭೀಕರ ಅಪಘಾತ : ಮಹಿಳೆ ಮೇಲೆ ಶಾಲಾ ಬಸ್ ಹರಿದು ತಲೆ ನಜ್ಜುಗುಜ್ಜು

ಬೆಂಗಳೂರು : ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಪತಿಯೊಂದಿಗೆ ತೆರಳುತ್ತಿದ್ದಾಗ ಸ್ಕೂಟರ್ ಸ್ಕಿಡ್ ಆಗಿ ಮಹಿಳೆ ಕೆಳಗೆ ಬಿದ್ದಿದ್ದಾರೆ. ಬಸ್ ಹರಿದ ಪರಿಣಾಮ ಮಹಿಳೆಯ ತಲೆ ಛಿದ್ರ ಛಿದ್ರವಾಗಿದೆ.

ಮೃತ ಮಹಿಳೆಯರನ್ನು ಸುಮಂಗಲ (58) ಎಂದು ಗುರುತಿಸಲಾಗಿದೆ. ಮಹಿಳೆ ಸ್ಕೂಟಿಯಿಂದ ಕೆಳಗೆ ಬಿದ್ದಿದ್ದು, ಹಿಂದಿನಿಂದ ವೇಗವಾಗಿ ಬರುತ್ತಿದ್ದ ಶಾಲಾ ಬಸ್ ಮಹಿಳೆ ಮೇಲೆ ಹರಿದಿದೆ. ಪರಿಣಾಮ ತಲೆ ಛಿದ್ರ ಛಿದ್ರವಾಗಿದೆ. ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಣ್ಣುಮುಂದೆ ಶವವಾಗಿ ಮಲಗಿದ್ದ ಪತ್ನಿಯನ್ನು ಕಂಡು ಪತಿ ರೋಧಿಸುತ್ತಿದ್ದ ದೃಶ್ಯ ಮನಕಲುಕುತ್ತಿತ್ತು.

ಬೆಂಗಳೂರಿನಲ್ಲಿ ಕಿಲ್ಲರ್ ‘BMTC’ ಬಸ್ ಗೆ ಮತ್ತೊಂದು ಬಲಿ : ಬೈಕ್ ಸವಾರನ ತಲೆ ಛಿದ್ರ ಛಿದ್ರ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು : ಬೆಂಗಳೂರಿನ ಟಿ ದಾಸರಹಳ್ಳಿಯಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಸ್ ಅಡಿ ಸಿಲುಕಿ ಬೈಕ್ ಸವಾರ ಮೃತಪಟ್ಟಿದ್ದಾನೆ.

ಮೊದಲು ಕಾರಿಗೆ ಡಿಕ್ಕಿಯಾಗಿ ಬೈಕ್ ಸವಾರ ಕೆಳಗೆ ಬಿದ್ದಿದ್ದಾನೆ. ನಂತರ ಹಿಂದೆಯಿಂದ ಬರುತ್ತಿದ್ದ ಬಿಎಂಟಿಸಿ ಬಸ್ ಈತನ ತಲೆ ಮೇಲೆ ಹರಿದಿದೆ. ಪರಿಣಾಮ ಬೈಕ್ ಸವಾರನ ತಲೆ ನಜ್ಜುಗುಜ್ಜಾಗಿದ್ದು, ಮೃತ ಸವಾರನ ಗುರುತು ಪತ್ತೆಯಾಗಿಲ್ಲ.ಘಟನೆ ನಂತರ ಬಿಎಂಟಿಸಿ ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದು, ಘಟನೆ ನಡೆದ ಸ್ಥಳಕ್ಕೆ ಪೀಣ್ಯ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ನಿನ್ನೆಯಷ್ಟೇ ಬಿಎಂಟಿಸಿ ಬಸ್ ಅಡಿ ಸಿಲುಕಿ 4 ವರ್ಷದ ಮಗು ಮೃತಪಟ್ಟಿತ್ತು,ಈ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಘಟನೆ ನಡೆದಿದೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular