ತಮಿಳುನಾಡಿನಲ್ಲಿ ಮತ್ತೊಂದು ಪಟಾಕಿ ದುರಂತ ಸಂಭವಿಸಿದ್ದು, ಒಂಬತ್ತು ಮಂದಿ ಸಜೀವ ದಹನವಾಗಿದ್ದಾರೆ.
ತಮಿಳುನಾಡಿನ ಶಿವಕಾಶಿ ಬಳಿಯ ಪಟಾಕಿ ತಯಾರಿಕಾ ಕಾರ್ಖಾನೆಗಳಲ್ಲಿ ಮಂಗಳವಾರ ಸಂಭವಿಸಿದ ಅವಳಿ ಸ್ಫೋಟದಲ್ಲಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ.
ವಿರುಧುನಗರ ಜಿಲ್ಲೆಯಲ್ಲಿ ಮೊದಲ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದ್ದು, ಅಗ್ನಿಶಾಮಕ ಇಲಾಖೆ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಅದೇ ಜಿಲ್ಲೆಯ ಕಮ್ಮಾಪಟ್ಟಿ ಗ್ರಾಮದ ಮತ್ತೊಂದು ಘಟಕದಲ್ಲಿ ಎರಡನೇ ಸ್ಫೋಟ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಸ್ಫೋಟದಿಂದಾಗಿ ಈವರೆಗೆ 9 ಜನರು ಪ್ರಾಣ ಕಳೆದುಕೊಂಡಿದ್ದಾರೆ, ಹಲವರಿಗೆ ಗಾಯಗಳಾಗಿದೆ ಎಂದು ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
https://twitter.com/ANI/status/1714209444467499286?ref_src=twsrc%5Etfw%7Ctwcamp%5Etweetembed%7Ctwterm%5E1714209444467499286%7Ctwgr%5Ef68fc8c9529a7b9fb6e07691f8c2db869d2b3db5%7Ctwcon%5Es1_&ref_url=https%3A%2F%2Fwww.deccanherald.com%2Findia%2Ftamil-nadu%2F9-dead-as-twin-explosions-strike-firecracker-units-in-tamil-nadus-sivakasi-2730242