BREAKING : ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ ; ಒಂದೇ ಕುಟುಂಬದ ನಾಲ್ವರು ಸಜೀವ ದಹನ..!

ನವದೆಹಲಿ : ದೆಹಲಿಯ ಪ್ರೇಮ್ ನಗರ ಪ್ರದೇಶದ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ದಂಪತಿ ಮತ್ತು ಅವರ 21 ಮತ್ತು 22 ವರ್ಷದ ಇಬ್ಬರು ಗಂಡು ಮಕ್ಕಳು ಸೇರಿದ್ದಾರೆ.

ಮಂಗಳವಾರ ಮುಂಜಾನೆ 3.30 ರ ಸುಮಾರಿಗೆ ಈ ಘಟನೆ ವರದಿಯಾಗಿದ್ದು, ನಂತರ ಎರಡು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ.

ದೆಹಲಿ ಅಗ್ನಿಶಾಮಕ ದಳದ ಪ್ರಕಾರ, ದಂಪತಿಯ ಮನೆಯಲ್ಲಿನ ಇನ್ವರ್ಟರ್ ಗೆ ಬೆಂಕಿ ಹೊತ್ತಿಕೊಂಡಿತ್ತು ಮತ್ತು ಅದು ಕಟ್ಟಡದ ಮೊದಲ ಮಹಡಿಯಲ್ಲಿರುವ ಪಕ್ಕದ ಸೋಫಾಗೆ ಹರಡಿತು, ಇದರಿಂದಾಗಿ ಬೆಂಕಿ ಹೊತ್ತಿ ಉರಿದಿದ್ದು, ಹೊರಬರಲಾರದೇ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read