HomeKarnatakaBREAKING : ಹಾವೇರಿಯಲ್ಲಿ ಘೋರ ದುರಂತ : ಆಕಸ್ಮಿಕವಾಗಿ ಕೊಟ್ಟಿಗೆಗೆ ಬೆಂಕಿ  ಬಿದ್ದು 30 ಕುರಿಗಳು...

BREAKING : ಹಾವೇರಿಯಲ್ಲಿ ಘೋರ ದುರಂತ : ಆಕಸ್ಮಿಕವಾಗಿ ಕೊಟ್ಟಿಗೆಗೆ ಬೆಂಕಿ  ಬಿದ್ದು 30 ಕುರಿಗಳು ಸಜೀವ ದಹನ.!

ರಾಣೇಬೆನ್ನೂರು (ಹಾವೇರಿ): ತಾಲ್ಲೂಕಿನಾದ್ಯಂತ ಬೇಸಿಗೆಯ ತಾಪ ಹೆಚ್ಚಾಗುತ್ತಿರುವ ಬೆನ್ನಲ್ಲೇ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದ್ದು, ಅಂದಾಜು 30 ಕುರಿಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಹರನಗಿರಿಯಲ್ಲಿ ನಡೆದಿದೆ.

ಇಲ್ಲಿನ ನಿವಾಸಿ ಹುಚ್ಚಪ್ಪ ಮುದ್ದಿ ಎಂಬುವವರಿಗೆ ಸೇರಿದ ಕುರಿಗಳ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದೆ. ನೋಡನೋಡುತ್ತಿದ್ದಂತೆಯೇ ಬೆಂಕಿಯ ಜ್ವಾಲೆ ಇಡೀ ಕೊಟ್ಟಿಗೆಯನ್ನು ಆವರಿಸಿಕೊಂಡಿದ್ದು, ಒಳಗೆ ಕಟ್ಟಿದ್ದ 30 ಕುರಿಗಳು ಹೊರಬರಲಾಗದೆ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಜೀವ ದಹನವಾಗಿವೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಭೇಟಿ: ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ನಂದಿಸಲು ಪ್ರಯತ್ನಿಸಿದರಾದರೂ ಸಾಧ್ಯವಾಗಲಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಾಗಲೇ ಕುರಿಗಳು ಮೃತಪಟ್ಟಿದ್ದವು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಣ್ಣೀರಲ್ಲಿ ಕುರಿಗಾಹಿ: ತನ್ನ ಬದುಕಿನ ಆಧಾರವಾಗಿದ್ದ ಕುರಿಗಳನ್ನು ಕಳೆದುಕೊಂಡ ಹುಚ್ಚಪ್ಪ ಮುದ್ದಿ ಅವರ ಕುಟುಂಬ ಕಣ್ಣೀರಲ್ಲಿ ಮುಳುಗಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಹಾನಿಯಾಗಿದ್ದು, ಸರ್ಕಾರ ಮತ್ತು ಜಿಲ್ಲಾಡಳಿತ ತಮಗೆ ಸೂಕ್ತ ಪರಿಹಾರ ನೀಡಬೇಕೆಂದು ಸಂತ್ರಸ್ತ ಕುರಿಗಾಹಿ ಅಳಲು ತೋಡಿಕೊಂಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular