ತೀರ್ಥಹಳ್ಳಿಯಲ್ಲಿ ದಾರುಣ ಘಟನೆ ; ಈಜಲು ತೆರಳಿದ್ದ ಮೂವರು ‘SSLC’ ವಿದ್ಯಾರ್ಥಿಗಳು ನೀರುಪಾಲು

ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಗಳನ್ನು ರಫನ್, ಇಯನ್ ಹಾಗೂ ಸಮ್ಮರ್ ಎಂದು ಗುರುತಿಸಲಾಗಿದೆ. ತೀರ್ಥಹಳ್ಳಿ ಪಟ್ಟಣದ ತುಂಗಾ ನದಿಯ ರಾಮ ಮಂಟಪದ ಬಳಿ ಈ ದುರ್ಘಟನೆ ನಡೆದಿದೆ.

ರಂಜಾನ್ ಉಪವಾಸ ಮುಗಿಸಿ ಮೂವರು ವಿದ್ಯಾರ್ಥಿಗಳು ಈಜಲು ತುಂಗಾನದಿಗೆ ತೆರಳಿದ್ದರು. ನೀರಿನ ಸೆಳೆತಕ್ಕೆ ಸಿಲುಕಿ ಮೇಲೆ ಬರಲು ಆಗದೇ ಮೂವರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಧಾವಿಸಿ ಮೂವರು ವಿದ್ಯಾರ್ಥಿಗಳ ಮೃತದೇಹವನ್ನು ಹೊರತೆಗೆದಿದ್ದಾರೆ. ಈ ಕುರಿತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read