ನಲಂದಾ (ಬಿಹಾರ): ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದಲ್ಲಿ ಮಂಗಳವಾರ ನಡೆದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.
ದೇವಸ್ಥಾನದಲ್ಲಿ ವಿಶೇಷ ಪೂಜೆಗಾಗಿ ಅಸಂಖ್ಯಾತ ಭಕ್ತರು ಸೇರಿದ್ದರಿಂದ ಅತಿಯಾದ ಜನದಟ್ಟಣೆ ಉಂಟಾಯಿತು. ಈ ಸಂದರ್ಭದಲ್ಲಿ ಕಾಲ್ತುಳಿತದಂತಹ ಪರಿಸ್ಥಿತಿ ನಿರ್ಮಾಣವಾಗಿ, ಹಲವರು ನೂಕುನುಗ್ಗಲಿನಲ್ಲಿ ಸಿಲುಕಿ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಘಟನೆಯ ನಂತರ ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಚರಣೆಗಳು ಪ್ರಾರಂಭವಾಗಿವೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ದೇವಾಲಯದಲ್ಲಿ ಅಗ್ನಿ ಅವಘಡ ಸಂಭವಿಸಿದ್ದರಿಂದ ಪ್ರಾಣ ಉಳಿಸಿಕೊಳ್ಳಲು ಜನರು ಓಡಿದ್ದಾರೆ. ಈ ವೇಳೆ ನೂಕು ನುಗ್ಗಲು ಉಂಟಾದ ಪರಿಣಾಮ ಕಾಲ್ತುಳಿತ ಸಂಭವಿಸಿದೆ ಎನ್ನಲಾಗಿದೆ.
(ಇದು ಪ್ರಸ್ತುತ ಲಭ್ಯವಿರುವ ಮಾಹಿತಿಯಾಗಿದ್ದು, ಹೆಚ್ಚಿನ ವಿವರಗಳು ನಿರೀಕ್ಷಿಸಲಾಗಿದೆ)

