ಮಂಗಳೂರು : ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಟೆಂಪೋ ಪಲ್ಟಿಯಾಗಿದ್ದು, ಘಟನೆಯ ಭಯಾನಕ ವೀಡಿಯೋ ವೈರಲ್ ಆಗಿದೆ.
ಗುರುವಾಯಂಕೆರೆ-ಕಾರ್ಕಳ ರಸ್ತೆಯಲ್ಲಿ ಈ ಘಟನೆ ನಡೆದಿದೆ. ರಸ್ತೆಯನ್ನು ಅಜಾಗರೂಕತೆಯಿಂದ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಟೆಂಪೋ ಟ್ರಾವೆಲರ್ ಪಲ್ಟಿಯಾಗಿದೆ. ಟೆಂಪೋದಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

