ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಯೋಧರು ತೆರಳುತ್ತಿದ್ದ ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ.
ಜಮ್ಮು ಕಾಶ್ಮೀರದ ಗುಲ್ ಮಾರ್ಗ್ ದಲ್ಲಿ ಘಟನೆ ನಡೆದಿದೆ. ಉಗ್ರರ ದಾಳಿಯಲ್ಲಿ ನಾಲ್ವರು ಯೋಧರಿಗೆ ಗಾಯಗಳಾಗಿವೆ. ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಭಯೋತ್ಪಾದಕರ ಸದೆಬಡಿಯಲು ಕಾರ್ಯಾಚರಣೆ ನಡೆಸಲಾಗಿದೆ.
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಬೆಂಗಾವಲು ಪಡೆಯ ಭಾಗವಾಗಿದ್ದ ಸೇನಾ ವಾಹನದ ಮೇಲೆ ಭಯೋತ್ಪಾದಕರ ದಾಳಿಯಲ್ಲಿ ನಾಗರಿಕ ಪೋರ್ಟರ್ ಸಾವನ್ನಪ್ಪಿದ್ದಾರೆ. ದಾಳಿಯಲ್ಲಿ ನಾಲ್ವರು ಯೋಧರೂ ಗಾಯಗೊಂಡಿದ್ದಾರೆ. ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
Terrorist attack on an Army vehicle which was part of a convoy in J&K's Baramulla in which a civilian porter has been killed. Four soldiers have also been injured in the attack. More details awaited: Army Officials pic.twitter.com/WCI5pCa2RS
— ANI (@ANI) October 24, 2024