HomeIndiaBREAKING: ಜಮ್ಮು ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರ ಅಟ್ಟಹಾಸ: ಸೇನಾ ವಾಹನದ ಮೇಲೆ ದಾಳಿ: ಓರ್ವ ಸಾವು,...

BREAKING: ಜಮ್ಮು ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರ ಅಟ್ಟಹಾಸ: ಸೇನಾ ವಾಹನದ ಮೇಲೆ ದಾಳಿ: ಓರ್ವ ಸಾವು, ನಾಲ್ವರು ಯೋಧರಿಗೆ ಗಾಯ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಯೋಧರು ತೆರಳುತ್ತಿದ್ದ ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ.

ಜಮ್ಮು ಕಾಶ್ಮೀರದ ಗುಲ್ ಮಾರ್ಗ್ ದಲ್ಲಿ ಘಟನೆ ನಡೆದಿದೆ. ಉಗ್ರರ ದಾಳಿಯಲ್ಲಿ ನಾಲ್ವರು ಯೋಧರಿಗೆ ಗಾಯಗಳಾಗಿವೆ. ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಭಯೋತ್ಪಾದಕರ ಸದೆಬಡಿಯಲು ಕಾರ್ಯಾಚರಣೆ ನಡೆಸಲಾಗಿದೆ.

ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಬೆಂಗಾವಲು ಪಡೆಯ ಭಾಗವಾಗಿದ್ದ ಸೇನಾ ವಾಹನದ ಮೇಲೆ ಭಯೋತ್ಪಾದಕರ ದಾಳಿಯಲ್ಲಿ ನಾಗರಿಕ ಪೋರ್ಟರ್ ಸಾವನ್ನಪ್ಪಿದ್ದಾರೆ. ದಾಳಿಯಲ್ಲಿ ನಾಲ್ವರು ಯೋಧರೂ ಗಾಯಗೊಂಡಿದ್ದಾರೆ. ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular