HomeLatest Newsಉಗ್ರರ ದಾಳಿಯಲ್ಲಿ ಮಡಿದವರಿಗೆ 'ಹುತಾತ್ಮ' ಗೌರವ ಕೊಡಲು ರಾಹುಲ್ ಗಾಂಧಿ ಒತ್ತಾಯ: ಭಯೋತ್ಪಾದಕರ ವಿರುದ್ಧ ಸರ್ಕಾರದ...

ಉಗ್ರರ ದಾಳಿಯಲ್ಲಿ ಮಡಿದವರಿಗೆ ‘ಹುತಾತ್ಮ’ ಗೌರವ ಕೊಡಲು ರಾಹುಲ್ ಗಾಂಧಿ ಒತ್ತಾಯ: ಭಯೋತ್ಪಾದಕರ ವಿರುದ್ಧ ಸರ್ಕಾರದ ಯಾವುದೇ ಕ್ರಮಕ್ಕೆ ಬೆಂಬಲ ಘೋಷಣೆ

ನವದೆಹಲಿ: ಉಗ್ರರ ವಿರುದ್ಧ ಯಾವುದೇ ಕ್ರಮ ಕೈಗೊಂಡರು ಬೆಂಬಲವಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಹಲ್ಗಾಮ್ ನಲ್ಲಿ ಯಾರೇ ದಾಳಿ ಮಾಡಿದ್ದರೂ ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. ಉಗ್ರರ ವಿರುದ್ಧ ಕೇಂದ್ರ ಸರ್ಕಾರ ಏನೇ ಕ್ರಮ ಕೈಗೊಂಡರೂ ಬೆಂಬಲ ನೀಡುತ್ತೇವೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಕೈಗೊಳ್ಳುವ ನಿರ್ಧಾರಕ್ಕೆ ವಿಪಕ್ಷಗಳ ಬೆಂಬಲವಿದೆ. ಉಗ್ರರ ವಿರುದ್ಧ ಪ್ರಧಾನಿ ಮೋದಿ ಕ್ರಮ ತೆಗೆದುಕೊಳ್ಳಬೇಕು. ಪಹಲ್ಗಾಮ್‌ ನಲ್ಲಿ ದಾಳಿ ಮಾಡಿದವರು ಯಾರೇ ಆಗಿರಲಿ ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಗ್ರರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಳಂಬ ಮಾಡಬಾರದು. ಉಗ್ರರ ವಿರುದ್ಧ ಆದಷ್ಟು ಬೇಗನೆ ಸರ್ಕಾರ ಕ್ರಮ ಕೈಗೊಳ್ಳಲಿ. ಉಗ್ರರ ದಾಳಿಯಲ್ಲಿ ಮಡಿದವರಿಗೆ ಹುತಾತ್ಮ ಗೌರವ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular