
ಘಟನೆ ಕುರಿತು ಇಸ್ರೇಲ್ ಗೆ ಧೈರ್ಯ ತುಂಬಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.ಇಸ್ರೇಲ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಸುದ್ದಿಯಿಂದ ತೀವ್ರ ಆಘಾತಕ್ಕೊಳಗಾಗಿದ್ದೇನೆ. ನಮ್ಮ ಪ್ರಾರ್ಥನೆಗಳು ಮುಗ್ಧ ಬಲಿಪಶುಗಳು ಮತ್ತು ಅವರ ಕುಟುಂಬಗಳೊಂದಿಗೆ ಇವೆ. ಈ ಕಷ್ಟದ ಸಮಯದಲ್ಲಿ ನಾವು ಇಸ್ರೇಲ್ ನೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.
ಪ್ಯಾಲೆಸ್ತೀನ್ ಸಶಸ್ತ್ರ ಗುಂಪು ಹಮಾಸ್ ಶನಿವಾರ ಇಸ್ರೇಲ್ ಕಡೆಗೆ 5,000 ಕ್ಕೂ ಹೆಚ್ಚು ರಾಕೆಟ್ ಗಳನ್ನು ಉಡಾಯಿಸಿದ ಪರಿಣಾಮ 22 ಜನರು ಸಾವನ್ನಪ್ಪಿದ್ದು, 545 ಇಸ್ರೇಲಿಗಳು ಗಾಯಗೊಂಡಿದ್ದಾರೆ ಎಂದು ದೇಶದ ಆರೋಗ್ಯ ಸಚಿವಾಲಯ ತಿಳಿಸಿದೆ.
Deeply shocked by the news of terrorist attacks in Israel. Our thoughts and prayers are with the innocent victims and their families. We stand in solidarity with Israel at this difficult hour.
— Narendra Modi (@narendramodi) October 7, 2023

