ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಬುಧವಾರ ಗಸ್ತು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಉಗ್ರರು ಬುಧವಾರ ಗಸ್ತು ತಿರುಗುತ್ತಿದ್ದ ಪೊಲೀಸ್ ತಂಡದ ಮೇಲೆ ಗುಂಡಿನ ದಾಳಿ ನಡೆಸಿದ್ದು, ಕಾನ್‌ಸ್ಟೇಬಲ್ ಒಬ್ಬರು ಹುತಾತ್ಮರಾಗಿದ್ದಾರೆ. ದಾಳಿಯ ಬಳಿಕ ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರಿದು, ಉಗ್ರರ ಪತ್ತೆಗಾಗಿ ವ್ಯಾಪಕ ಶೋಧ ಹಾಗೂ ಉಗ್ರವಿರೋಧಿ ಕಾರ್ಯಾಚರಣೆಯನ್ನು ಆರಂಭಿಸಿವೆ.ದಾಳಿಯ ಬಳಿಕ ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರಿದು, ಉಗ್ರರ ಪತ್ತೆಗಾಗಿ ವ್ಯಾಪಕ ಶೋಧ ಹಾಗೂ ಉಗ್ರವಿರೋಧಿ ಕಾರ್ಯಾಚರಣೆಯನ್ನು ಆರಂಭಿಸಿವೆ.
ಮೂಲಗಳ ಪ್ರಕಾರ, ವಾಹನದಲ್ಲಿ ಬಂದ ಉಗ್ರರು ಚಲಿಸುತ್ತಿದ್ದ ವಾಹನದಿಂದಲೇ ಗಸ್ತು ತಿರುಗುತ್ತಿದ್ದ ಪೊಲೀಸ್ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ.ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.
ಘಟನೆಯ ಬಳಿಕ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದು, ದಾಳಿಕೋರರನ್ನು ಪತ್ತೆಹಚ್ಚಲು ವ್ಯಾಪಕ ಶೋಧ ಹಾಗೂ ಉಗ್ರರ ವಿರುದ್ಧದ ಕಾರ್ಯಾಚರಣೆಯನ್ನು ಆರಂಭಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

