HomeLatest NewsBIG NEWS: ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ಸಹೋದರ ಸಾವು

BIG NEWS: ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ಸಹೋದರ ಸಾವು

ಇಸ್ಲಾಮಾಬಾದ್: ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖಸ್ಥ ಮಸೂದ್ ಅಜರ್​ನ ಸಹೋದರ ಮೊಹಮ್ಮದ್ ತಾಹಿರ್ ಅನ್ವರ್ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಬಹಾವಲ್ಪುರದಲ್ಲಿ ಆತನ ಅಂತ್ಯಕ್ರಿಯೆ ನಡೆದಿದೆ ಎಂದು ವರದಿಯಾಗಿದೆ. ಅತನ ಸಾವು ಹೇಗೆ ಸಂಭವಿಸಿದೆ ಎಂಬುದರ ಬಗ್ಗೆ ಸಂಘಟನೆ ಬಹಿರಂಗಗೊಳಿಸಿಲ್ಲ. ತಾಹಿರ್ ಅನ್ವರ್ ತನ್ನ ಸಹೋದರನ ಭಯೋತ್ಪಾದಕ ಸಂಘಟನೆಯಾದ ಜೈಶ್-ಎ-ಮೊಹಮ್ಮದ್‌ನೊಂದಿಗೆ ಸಹ ಸಂಬಂಧ ಹೊಂದಿದ್ದ ಎನ್ನಲಾಗಿದೆ.

ಸೋಮವಾರ ತಡರಾತ್ರಿ ಬಹಾವಲ್ಪುರದ ಜಾಮಿಯಾ ಮಸೀದಿ ಉಸ್ಮಾನ್ ವಾಲಿ ಬಳಿ ತಾರಿಕ್​ನನ್ನು ಸಮಾಧಿ ಮಾಡಲಾಗಿದೆ ಎಂದು ಸಂಘಟನೆಯ ಅಧಿಕೃತ ಚಾನೆಲ್ ಮೂಲಕ ದೃಢಪಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲವು ತಿಂಗಳುಗಳಿಂದ, ಪಾಕಿಸ್ತಾನದಲ್ಲಿ ವಿವಿಧ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದ ಹಲವಾರು ಜನರನ್ನು ಕೊಲ್ಲಲಾಗಿದೆ. ಪರಿಣಾಮ ತಾಹಿರ್ ಸಾವಿನ ಬಗ್ಗೆ ವಿವಿಧ ಊಹಾಪೋಹಗಳು ಹರಡುತ್ತಿವೆ. ಆದಾಗ್ಯೂ, ಆತನ ಮೇಲೆ ದಾಳಿ ನಡೆದಿದೆ ಎಂಬುದಕ್ಕೆ ಯಾವುದೇ ಮಾಹಿತಿ ಹೊರಬಂದಿಲ್ಲ.

ತಾಹಿರ್ ಅನ್ವರ್ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ನ ಹಿರಿಯ ಸಹೋದರ. ಅನ್ವರ್ ಮಸೂದ್ ಅಜರ್ ನ ಐವರು ಸಹೋದರರಲ್ಲಿ ಒಬ್ಬ. ಅನ್ವರ್ ಜೈಶ್-ಎ-ಮೊಹಮ್ಮದ್ ನ ಕಾರ್ಯಾಚರಣೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ.ಇತ್ತೀಚಿನ ದಿನಗಳಲ್ಲಿ ಮಸೂದ್ ಅಜರ್ ಕುಟುಂಬದಲ್ಲಿ ಸರಣಿ ಸಾವುಗಳು ಸಂಭವಿಸಿವೆ.

ಭಾರತವು ಆಪರೇಷನ್ ಸಿಂಧೂರ್ ನಡೆಸಿದಾಗ ಬಹಾವಲ್ಪುರದಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಮಸೂದ್ ಕುಟುಂಬದ ಹತ್ತು ಸದಸ್ಯರು ಮತ್ತು ಕೆಲವು ಸಹಚರರು ಸಾವನ್ನಪ್ಪಿದ್ದಾರೆ. ಕೊಲ್ಲಲ್ಪಟ್ಟವರಲ್ಲಿ ಅವರ ಸಹೋದರಿ, ಸೋದರಳಿಯ ಮತ್ತು ಇತರ ಕುಟುಂಬ ಸದಸ್ಯರು ಸೇರಿದ್ದಾರೆ. ಮಸೂದ್ ಎಂದು ಹೇಳಲಾದ ಕೆಲವು ಆಡಿಯೊ ರೆಕಾರ್ಡಿಂಗ್‌ಗಳು ಸಹ ಸಾವನ್ನು ದೃಢಪಡಿಸಿವೆ.

ಜೈಶ್-ಎ-ಮೊಹಮ್ಮದ್ ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಭಯೋತ್ಪಾದಕ ಸಂಘಟನೆಯಾಗಿದೆ. ಭಾರತದಲ್ಲಿ ನಡೆದ ಬಹುತೇಕ ದಾಳಿಗಳಲ್ಲಿ ಜೈಶ್ ಸಂಘಟನೆ ಕೈವಾಡವಿದೆ. ಜೈಶ್ 2001 ರ ಸಂಸತ್ ದಾಳಿ, 2008 ರ ಮುಂಬೈ ದಾಳಿ, 2016 ರ ಪಠಾಣ್‌ಕೋಟ್ ದಾಳಿ ಮತ್ತು 2019 ರ ಪುಲ್ವಾಮಾ ದಾಳಿಯಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular