ಪಾಕಿಸ್ತಾನದ ಪೇಶಾವರದಲ್ಲಿರುವ ಫ್ರಾಂಟಿಯರ್ ಕಾನ್‌ಸ್ಟಾಬ್ಯುಲರಿ ಪ್ರಧಾನ ಕಚೇರಿಯನ್ನು ಗುರಿಯಾಗಿಸಿಕೊಂಡು ಸೋಮವಾರ ಬೆಳಿಗ್ಗೆ ಬಂದೂಕುಧಾರಿಗಳು ಮತ್ತು ಶಂಕಿತ ಆತ್ಮಹತ್ಯಾ ಬಾಂಬರ್‌ಗಳು ನಡೆಸಿದ ದಾಳಿಯಲ್ಲಿ ಮೂವರು ಕಮಾಂಡೋಗಳು ಮತ್ತು ಮೂವರು ದಾಳಿಕೋರರು ಸೇರಿದಂತೆ ಆರು ಜನರು ಸಾವನ್ನಪ್ಪಿದರು.
ಈ ದಾಳಿಯು ವ್ಯಾಪಕ ಭದ್ರತಾ ಕಾರ್ಯಾಚರಣೆಗೆ ನಾಂದಿ ಹಾಡಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅರೆಸೈನಿಕ ಕಟ್ಟಡದ ಮುಖ್ಯ ದ್ವಾರದಲ್ಲಿ ಎರಡು ಸ್ಫೋಟಗಳೊಂದಿಗೆ ದಾಳಿ ಪ್ರಾರಂಭವಾಯಿತು, ನಂತರ ಶಸ್ತ್ರಸಜ್ಜಿತ ವ್ಯಕ್ತಿಗಳು ಆವರಣಕ್ಕೆ ನುಗ್ಗಿ ಭದ್ರತಾ ಸಿಬ್ಬಂದಿಯೊಂದಿಗೆ ಗುಂಡಿನ ಚಕಮಕಿ ನಡೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ.
