HomeKarnatakaಜೂನ್ 30ರಂದು ಟಿಇಟಿ ಪರೀಕ್ಷೆ, ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಜೂನ್ 30ರಂದು ಟಿಇಟಿ ಪರೀಕ್ಷೆ, ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಜೂನ್ 30ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ನಡೆಯಲಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿ ನಿಗದಿತ ಶುಲ್ಕ ಪಾವತಿಸಿದ ಎಲ್ಲಾ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದಾಗಿ ಕೇಂದ್ರೀಕೃತ ದಾಖಲಾತಿ ಘಟಕ ತಿಳಿಸಿದೆ.

http://school education.karnataka.gov.in ವೆಬ್ಸೈಟ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರಗಳನ್ನು ಅಭ್ಯರ್ಥಿಗಳು ಜೂನ್ 20ರಿಂದ ಡೌನ್ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳಿಗೆ ನೀಡಲಾದ ಸೂಚನೆಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದು, ಅಂತೆಯೇ ಸಿದ್ಧತೆ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬೇಕು. ಶಾಲಾ ಶಿಕ್ಷಣ ಇಲಾಖೆ ಹಾಗೂ ಪರೀಕ್ಷಾ ನೋಡಲ್ ಅಧಿಕಾರಿಗಳ ದೂರವಾಣಿ ಸಂಖ್ಯೆ ಪ್ರಕಟಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular