ಬೆಂಗಳೂರು : ಕರ್ನಾಟಕ ಅರ್ಹತಾ ಪರೀಕ್ಷೆ 2025ರ ಅರ್ಹತಾ ಪರೀಕ್ಷೆಯು ಡಿಸೆಂಬರ್ 07, 2025 ರಂದು ನಡೆಯಲಿದ್ದು, ಪರೀಕ್ಷೆಯು ಎರಡು ಅವಧಿಯಲ್ಲಿ ನಡೆಯುತ್ತದೆ, ಬೆಳಿಗ್ಗೆ 9. 30 ರಿಂದ 12 ಗಂಟೆವರೆಗೆ ಮತ್ತು ಮದ್ಯಾಹ್ನದ 2 ರಿಂದ 4.30 ರ ವರೆಗೆ ಪರೀಕ್ಷೆಯು ನಡೆಯುತ್ತದೆ. ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!
ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಯಾವುದೇ ರೀತಿಯ ನಕಲು ಹಾಗೂ ಮೊಬೈಲ್, ಬ್ಲೂಟೂತ್, ಸ್ಮಾರ್ಟ್ ವಾಚ್ ಸೇರಿದಂತೆ ಅತ್ಯಾಧುನಿಕ ತಾಂತ್ರಿಕ ಸಾಧನ ಸಲಕರಣೆಗಳನ್ನು ಪರೀಕ್ಷಾ ಕೊಠಡಿಗೆ ತರದಂತೆ ಮತ್ತು ಬಳಸದಂತೆ ಮುಂಜಾಗೃತೆ ವಹಿಸಬೇಕೆಂದು ಸೂಚಿಸಲಾಗಿದೆ.
ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರತಿ ಅಧಿವೇಶನದ ಪರೀಕ್ಷಾ ಪ್ರಾರಂಭದ ಅವಧಿಗಿಂತ ಒಂದು ಗಂಟೆ ಮುಂಚಿತವಾಗಿ ಹಾಜರಿರಬೇಕು. ಪರೀಕ್ಷೆ ಪತ್ರ ಇಲ್ಲದೇ ಪರೀಕ್ಷೆ ಬರೆಯಲು ಅವಕಾಶವಿರುವುದಿಲ್ಲ. ಈ ಬಗ್ಗೆ ಯಾವುದೇ ವಿನಾಯಿತಿ ಇರುವುದಿಲ್ಲ.
*ಪೂರ್ವ ಮುದ್ರಿತ ಓಎಂಆರ್ ನಲ್ಲಿ ಒಮ್ಮೆ ಬರೆದಿರುವುದನ್ನು ಪುನ: ಬದಲಾಯಿಸುವುದು , ತಿದ್ದುವುದು , ಬಿಳಿ ಪ್ಲ್ಯೂಯಿಡ್ ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಬಿಳಿ ಪ್ಲ್ಯೂಯಿಡ್ ಹಚ್ಚಿ ಉತ್ತರ ಬದಲಾಯಿಸಲು ಅವಕಾಶವಿಲ್ಲ. ಇಂತಹ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನಕ್ಕೆ ಪರಿಗಣಿಸುವುದಿಲ್ಲ.
*ಪರೀಕ್ಷೆಗೆ ಆಗಮಿಸುವ ಅಭ್ಯರ್ಥಿಗಳು ಮೊಬೈಲ್ ಫೋನ್, ಬ್ಲೂಟೂತ್ ಡಿವೈಸ್, ಪೇಜರ್, ವೈರ್ಲೆಸ್, ಕ್ಯಾಲ್ಕುಲೇಟರ್, ಮೊದಲಾದ ಎಲೆಕ್ಟ್ರಾನಿಕ್ ಉಪಕರಣಗಳು, ಸ್ಲೈಡ್ ರೂಲುಗಳು, ಮಾರ್ಕರ್ಗಳು, ಲಾಗ್ ಟೇಬಲ್ಗಳು, ವೈಟ್ಫ್ಲೂಯಿಡ್ಗಳು, ಬ್ಲೇಡು, ಇಂಕ್ ಎರೇಸರ್, ಬಿಳಿ ಫ್ಲೂಯಿಡ್, ಬೆಂಕಿ ಪೊಟ್ಟಣ, ಸಿಗರೆಟ್ ಲೈಟರ್ ಮುಂತಾದವುಗಳನ್ನು ಪರೀಕ್ಷಾ ಕೇಂದ್ರದ ಆವರಣದೊಳಗೆ ತರುವುದನ್ನು ನಿಷೇಧಿಸಲಾಗಿದೆ.
ಹೊಸ ನಿಯಮ ತಿದ್ದುಪಡಿ ಪ್ರಕಟ
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025ರ ಸಂಬಂಧ ದಿನಾಂಕ:18/10/2025 ರಂದು ಹೊರಡಿಸಲಾದ ಅಧಿಸೂಚನೆಯ ಪುಟ ಸಂಖ್ಯೆ: 06 ರಲ್ಲಿ ಕಂಡಿಕೆಯ ಕ್ರ.ಸಂ.7.2 ಪತ್ರಿಕೆ-1 (1 ರಿಂದ 5ನೇ ತರಗತಿಗಳಿಗೆ) ಅಗತ್ಯವಿರುವ ಕನಿಷ್ಟ ವಿದ್ಯಾರ್ಹತೆ – ರಲ್ಲಿನ ಕೊನೆಯ ಉಪಕಂಡಿಕೆಯಾದ”ಅಥವಾ ಪದವಿಯಲ್ಲಿ ಕನಿಷ್ಠ ಶೇ.50 ರಷ್ಟು ಅಂಕಗಳನ್ನು ಗಳಿಸಿರಬೇಕು ಹಾಗೂ ಬಿ.ಇಡಿ ಪದವಿಯಲ್ಲಿ ತೇರ್ಗಡೆ ಹೊಂದಿರುವವರು ಅಥವಾ ಪ್ರವೇಶ ಪಡೆದು ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳು” ಎಂದಿರುವುದನ್ನು ಹಿಂಪಡೆಯಲಾಗಿದೆ.

