HomeLatest Newsಮಹಾರಾಷ್ಟ್ರ TET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮಾಸ್ಟರ್ ಮೈಂಡ್ ವಿಜಯೇಂದ್ರ ಗುಪ್ತಾ ಅರೆಸ್ಟ್

ಮಹಾರಾಷ್ಟ್ರ TET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮಾಸ್ಟರ್ ಮೈಂಡ್ ವಿಜಯೇಂದ್ರ ಗುಪ್ತಾ ಅರೆಸ್ಟ್

ಮುಂಬೈ: ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ನಡೆದ ಟಿಇಟಿ (ಶಿಕ್ಷಕರ ಅರ್ಹತಾ ಪರೀಕ್ಷೆ) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಟರ್‌ ಮೈಂಡ್ ವಿಜಯೇಂದ್ರ ಗುಪ್ತಾನನ್ನು ಪೊಲೀಸರು ಬಂಧಿಸಲಾಗಿದೆ.

ಥಾಣೆ ಪೊಲೀಸರು ಬಿಹಾರದಲ್ಲಿ ಪ್ರಮುಖ ಆರೋಪಿ ವಿಜಯೇಂದ್ರ ಗುಪ್ತಾನನ್ನು ಬಂಧಿಸಿದ್ದಾರೆ. ಈ ಮೂಲಕ ಈ ಮೂಲಕ ಪ್ರಕರಣದ ಮುಂದಿನ ತನಿಖೆಗೆ ಹೊಸ ದಿಕ್ಕು ಸಿಕ್ಕಂತಾಗಿದೆ. ರಾಜ್ಯದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಇನ್ನು ಮುಂದೆ ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಲಾಗಿದ್ದು, ಇಂತಹ ಪ್ರಕರಣಗಳನ್ನು ನಿಭಾಯಿಸಲು ಹೊಸ ಮಸೂದೆಯೊಂದನ್ನು ಜಾರಿಗೆ ತರಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ.

ಈ ಹಿಂದೆ ಮಹಾರಾಷ್ಟ್ರದಲ್ಲಿ ಟಿಇಟಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. ಈ ಪ್ರಕರಣದ ತನಿಖೆ ಕೈಗೊಂಡಿದ್ದ ಥಾಣೆ ಪೊಲೀಸರು, ಬಿಹಾರದಲ್ಲಿ ಅಡಗಿಕೊಂಡಿದ್ದ ಮಾಸ್ಟರ್‌ ಮೈಂಡ್ ವಿಜಯೇಂದ್ರ ಗುಪ್ತಾನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular