ಆಸ್ಟಿನ್ (ಟೆಕ್ಸಾಸ್): ಅಮೆರಿಕದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಟೆಕ್ಸಾಸ್ ನಗರದ ಉತ್ತರ ಆಸ್ಟಿನ್ ನಲ್ಲಿ ಘಟನೆ ನಡೆದಿದೆ. ದುಷ್ಕರ್ಮಿಯೊಬ್ಬ ಮಳಿಗೆಗೆ ನುಗ್ಗಿ ಫೈರಿಂಗ್ ಮಾಡಿದ್ದಾನೆ. ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಟೆಕ್ಸಾಸ್‌ನ ಟಾರ್ಗೆಟ್ ಅಂಗಡಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಆಸ್ಟಿನ್ ಪೊಲೀಸ್ ಮುಖ್ಯಸ್ಥೆ ಲಿಸಾ ಡೇವಿಸ್ ಅವರು ಮಾಹಿತಿ ನೀಡಿದ್ದಾರೆ.
ಗುಂಡು ಹಾರಿಸಿದ ನಂತರ ಶಂಕಿತ ಸ್ಥಳದಿಂದ ಪರಾರಿಯಾಗಿದ್ದ. ಶಂಕಿತನು 30 ರ ಹರೆಯದ ವ್ಯಕ್ತಿಯಾಗಿದ್ದು, ಮಾನಸಿಕ ಆರೋಗ್ಯ ಸಮಸ್ಯೆಗಳ ದಾಖಲಿತ ಇತಿಹಾಸವನ್ನು ಹೊಂದಿದ್ದಾನೆ. ಪರಾರಿಯಾಗಲು ಪ್ರಯತ್ನಿಸುತ್ತಿರುವಾಗ ಆರೋಪಿಯನ್ನು ಬಂಧಿಸಲಾಗಿದೆ.
ಆಸ್ಟಿನ್-ಟ್ರಾವಿಸ್ ಕೌಂಟಿ ತುರ್ತು ವೈದ್ಯಕೀಯ ಸೇವೆಗಳ ಮುಖ್ಯಸ್ಥ ರಾಬರ್ಟ್ ಲಕ್ರಿಟ್ಜ್ ಪ್ರಕಾರ, ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ. ಚಿಕಿತ್ಸೆಯ ಸಮಯದಲ್ಲಿ ಮೂರನೇ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.