ಶಾಲಾ, ಕಾಲೇಜು ಮಕ್ಕಳ ಪೋಷಕರಿಗೆ ಶಾಕಿಂಗ್ ನ್ಯೂಸ್: ಪಠ್ಯ ಪುಸ್ತಕ ದರ ಶೇ. 25 ರಷ್ಟು ಏರಿಕೆ

ಬೆಂಗಳೂರು: ಖಾಸಗಿ ಶಾಲಾ, ಕಾಲೇಜುಗಳ ಮಕ್ಕಳ ಪಠ್ಯ ಪುಸ್ತಕದ ದರ ಶೇಕಡ 25ರಷ್ಟು ದುಬಾರಿ ಆಗಿದೆ. ಶಾಲೆಗಳಿಗೆ ಸರ್ಕಾರದಿಂದ ಪೂರೈಸುವ ಪುಸ್ತಕ ಬೆಲೆ ಏರಿಕೆ ಮಾಡಲಾಗಿದ್ದು, 19000 ಶಾಲೆ-ಕಾಲೇಜುಗಳ 52 ಲಕ್ಷ ವಿದ್ಯಾರ್ಥಿಗಳ ಪೋಷಕರಿಗೆ ಹೊರೆಯಾಗಲಿದೆ ಎಂದು ಹೇಳಲಾಗಿದೆ.

ರಾಜ್ಯ ಪಠ್ಯಕ್ರಮ ಬೋಧನೆ ಮಾಡುವ ಖಾಸಗಿ ಶಾಲೆ ಮತ್ತು ಪಿಯು ಕಾಲೇಜುಗಳ ಮಕ್ಕಳಿಗೆ ಸರ್ಕಾರದಿಂದ ಪಠ್ಯಪುಸ್ತಕ ಪೂರೈಕೆ ಮಾಡಲಿದ್ದು, ಈ ಪುಸ್ತಕಗಳ ಬೆಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶೇಕಡ 25ರಷ್ಟು ಹೆಚ್ಚಳ ಆಗಲಿದೆ. ಶಿಕ್ಷಣ ಇಲಾಖೆ ವತಿಯಿಂದ ರಾಜ್ಯ ಪಠ್ಯಕ್ರಮದ ಪುಸ್ತಕಗಳನ್ನು ಅಗತ್ಯಕ್ಕೆ ಅನುಗುಣವಾಗಿ ಮುದ್ರಣ ಮಾಡಿ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆ. ಪಿಯು ಕಾಲೇಜುಗಳಿಗೆ ಪೂರೈಕೆ ಮಾಡಲಾಗುತ್ತದೆ.

ಸರ್ಕಾರಿ ಮತ್ತು ಅನುದಾನಿತ ಶಾಲೆ ಕಾಲೇಜುಗಳಿಗೆ ಉಚಿತವಾಗಿ ಪಠ್ಯಪುಸ್ತಕ ಪೂರೈಕೆ ಮಾಡಲಾಗುವುದು. ಖಾಸಗಿ ಶಾಲೆ, ಕಾಲೇಜುಗಳು ಒಂದರಿಂದ 12ನೇ ತರಗತಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶೈಕ್ಷಣಿಕ ವರ್ಷ ಆರಂಭಕ್ಕೆ ಮುನ್ನ ಸರ್ಕಾರಕ್ಕೆ ಶೇಕಡ 10ರಷ್ಟು ಮುಂಗಡ ಹಣ ಪಾವತಿಸಿ ಬೇಡಿಕೆ ಸಲ್ಲಿಸಬೇಕಿದೆ. ಇದಕ್ಕೆ ಅನುಗುಣವಾಗಿ ಪಠ್ಯಪುಸ್ತಕ ಮುದ್ರಣ ಮಾಡಿ ಪೂರೈಕೆ ಮಾಡಲಾಗುವುದು.

2023 -24ನೇ ಶೈಕ್ಷಣಿಕ ಸಾಲಿನ ಪಠ್ಯ ಪುಸ್ತಕಗಳಿಗೆ ಕಳೆದ ವರ್ಷಕ್ಕಿಂತ ಶೇಕಡ 20 ರಿಂದ 25 ರಷ್ಟು ದರ ಹೆಚ್ಚಳ ಮಾಡಲಾಗಿದೆ. ಕಳೆದ ವರ್ಷ 46 ರೂಪಾಯಿ ಇದ್ದ ಗಣಿತ ಭಾಗ -2 ಪುಸ್ತಕದ ಮಾರಾಟ ಬೆಲೆ 60 ರೂಪಾಯಿಗೆ ಏರಿಕೆಯಾಗಿದೆ. ಬೆಲೆ ಏರಿಕೆ ಮತ್ತು ಜಿ.ಎಸ್.ಟಿ. ಕಾರಣದಿಂದ ಪಠ್ಯಪುಸ್ತಕ ದರ ಹೆಚ್ಚಳವಾಗಿದೆ. ಕಾಗದದ ಬೆಲೆ, ಮುದ್ರಣ ವೆಚ್ಚಕ್ಕೆ ಅನುಗುಣವಾಗಿ ಬೆಲೆ ಏರಿಕೆ ಮಾಡಲಾಗಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read