HomeBusiness25 ತಾಲೂಕುಗಳಲ್ಲಿ ಮಿನಿ ಜವಳಿ ಪಾರ್ಕ್ ಸ್ಥಾಪನೆ: ಸಿಎಂ ಬಸವರಾಜ ಬೊಮ್ಮಾಯಿ

25 ತಾಲೂಕುಗಳಲ್ಲಿ ಮಿನಿ ಜವಳಿ ಪಾರ್ಕ್ ಸ್ಥಾಪನೆ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು:  ರಾಜ್ಯದ 25 ತಾಲೂಕುಗಳಲ್ಲಿ ಮಿನಿ ಜವಳಿ ಪಾರ್ಕ್ ಸ್ಥಾಪನೆ ಮಾಡಲಾಗುವುದು. ಅಮೆಜಾನ್, ಫ್ಲಿಪ್ಕಾರ್ಟ್ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ನೇಕಾರರು ಹೆಚ್ಚಿನ ಸಂಖ್ಯೆಯಲ್ಲಿರುವ 25 ತಾಲೂಕುಗಳಲ್ಲಿ ಮಿನಿ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿದ್ಯುತ್ ಮಗ್ಗ ನೇಕಾರರು ಮತ್ತು ಕಾರ್ಮಿಕರಿಗೆ ಡಿಬಿಟಿ ಮೂಲಕ ನೇಕಾರರ ಸಮ್ಮಾನ್ ಯೋಜನೆಯ ಸಹಾಯಧನ ವರ್ಗಾವಣೆಗೆ ಚಾಲನೆ ನೀಡಿದ ಸಿಎಂ, ಹತ್ತಿ ಸಂಸ್ಕರಣೆಯಿಂದ ಬಟ್ಟೆ ತಯಾರಿಕೆ, ಸಿದ್ಧ ಉಡುಪು ತಯಾರಿಕೆ ಸೇರಿದಂತೆ ಎಲ್ಲಾ ಹಂತಗಳ ಸೌಲಭ್ಯ ಒಳಗೊಂಡ ಮಿನಿ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪನೆಗೆ ಕ್ರಮ ಕೈಗೊಂಡು ನೇಕಾರರಿಗೆ ಅನುಕೂಲ ಮಾಡಿಕೊಡಬೇಕು ಎಂದು ತಿಳಿಸಿದ್ದಾರೆ.

ನೇಕಾರರು ಉತ್ಪನ್ನಗಳ ಗುಣಮಟ್ಟ ಹೆಚ್ಚಿಸುವ ಮೂಲಕ ರಫ್ತು ಮಾಡಲು ಮುಂದಾಗಬೇಕು. ಡಿಜಿಟಲ್ ವೇದಿಕೆ ಮೂಲಕ ಮಾರುಕಟ್ಟೆ ವಿಸ್ತರಿಸಬೇಕು. ಇದಕ್ಕೆ ಕೈ ಮಗ್ಗ ಮತ್ತು ಜವಳಿ ಇಲಾಖೆ ಸಹಕಾರ ನೀಡಲಿದೆ. ಅಮೆಜಾನ್ ಫ್ಲಿಪ್ಕಾರ್ಟ್ ಮೊದಲಾದ ಆನ್ಲೈನ್ ವ್ಯಾಪಾರಿ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular