ಪ್ರವಾಸಿಗರಿಗೆ ಭರ್ಜರಿ ಸುದ್ದಿ: ಭಾರತೀಯರಿಗೆ ವೀಸಾ ಮುಕ್ತ ಪ್ರವೇಶ ಘೋಷಿಸಿದ ಥಾಯ್ಲೆಂಡ್

ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಥಾಯ್ಲೆಂಡ್ ಭಾರತೀಯ ನಾಗರಿಕರಿಗೆ ವೀಸಾ ಮುಕ್ತ ಪ್ರವೇಶವನ್ನು ಘೋಷಿಸಿದೆ.

ತನ್ನ ಪ್ರವಾಸೋದ್ಯಮ ವಲಯ ಪುನರುಜ್ಜೀವನಗೊಳಿಸುವ ಸಲುವಾಗಿ ಹಲವಾರು ಭಾರತೀಯ ಪ್ರವಾಸಿಗರಿಗೆ ವೀಸಾಗಳನ್ನು ರದ್ದುಗೊಳಿಸುತ್ತಿದೆ. ಈ ವರ್ಷದ ನ.10 ರಿಂದ ಮೇ 10, 2024 ರ ನಡುವೆ ಭಾರತೀಯ ಪ್ರವಾಸಿಗರು ವೀಸಾ ಇಲ್ಲದೆ ಥಾಯ್ಲೆಂಡ್‌ಗೆ ಪ್ರವೇಶಿಸಲು ಸಾಧ್ಯವಾಗುತ್ತದೆ ಎಂದು ಥಾಯ್ ಪ್ರಧಾನಿ ಶ್ರೆತ್ತಾ ಥಾವಿಸಿನ್ ನಿನ್ನೆ ಕ್ಯಾಬಿನೆಟ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.

ಹೆಚ್ಚಿನ ಪ್ರವಾಸಿಗರನ್ನು ಸೆಳೆಯುವ ಪ್ರಯತ್ನದಲ್ಲಿ ತೈವಾನ್ ಅನ್ನು ಸಹ ಯೋಜನೆಯಲ್ಲಿ ಸೇರಿಸಲಾಗಿದೆ. ಸೆಪ್ಟೆಂಬರ್‌ನಲ್ಲಿ ಥೈಲ್ಯಾಂಡ್ ಚೀನಾ ಪ್ರವಾಸಿಗರಿಗೆ ವೀಸಾ ಅವಶ್ಯಕತೆಗಳನ್ನು ರದ್ದುಗೊಳಿಸಿತು. ಮಲೇಷ್ಯಾ, ಚೀನಾ ಮತ್ತು ದಕ್ಷಿಣ ಕೊರಿಯಾದ ನಂತರ ಸುಮಾರು 1.2 ಮಿಲಿಯನ್ ಆಗಮನದೊಂದಿಗೆ ಭಾರತವು ಈ ವರ್ಷ ಇಲ್ಲಿಯವರೆಗೆ ಪ್ರವಾಸೋದ್ಯಮಕ್ಕಾಗಿ ಥೈಲ್ಯಾಂಡ್‌ನ ನಾಲ್ಕನೇ ಅತಿದೊಡ್ಡ ಮೂಲ ಮಾರುಕಟ್ಟೆಯಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read