ಅತಿ ವೇಗವಾಗಿ ಬಂದ ಕಾರ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ 22 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಮಂಗಳವಾರ ರಾತ್ರಿ ಗೋದ್ ಬಂದರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಇದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅತಿ ವೇಗವೇ ಈ ಅಪಘಾತಕ್ಕೆ ಕಾರಣ ಎಂದು ಕಪೂರ್ ವಾಡಿ ಪೊಲೀಸರು ತಿಳಿಸಿದ್ದಾರೆ.
Maharashtra | A 22-year-old youth was killed while one was severely injured after an over-speeding car rammed into an electric pole on Thane's Ghodbunder Road last night. The injured was sent to a nearby hospital for treatment. Further probe underway: Kapurbawdi police pic.twitter.com/JRVoppFgyz
— ANI (@ANI) March 1, 2023

