ಕಣಿವೆಗೆ ಬಿದ್ದ ಹಾಲಿನ ಟ್ಯಾಂಕರ್: ಐವರು ಸಾವು

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಾಸರಘಾಟ್ ಬೆಟ್ಟದ ವಿಭಾಗದಲ್ಲಿ ಭಾನುವಾರ ಹಾಲಿನ ಟ್ಯಾಂಕರ್ 200 ಅಡಿ ಆಳದ ಕಣಿವೆಗೆ ಬಿದ್ದಿದೆ. ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಮುಂಬೈ ಕಡೆಗೆ ಹೋಗುತ್ತಿದ್ದ ಟ್ಯಾಂಕರ್, ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಣಿವೆ ಬಿದ್ದಿದೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ. ಟ್ಯಾಂಕರ್ ನಾಸಿಕ್ ಜಿಲ್ಲೆಯ ಸಿನ್ನಾರ್ ನಿಂದ ಮುಂಬೈ ಕಡೆಗೆ ಹೋಗುತ್ತಿತ್ತು ಎಂದು ಥಾಣೆ ಗ್ರಾಮಾಂತರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಕ್ಷಣಾ ಸಿಬ್ಬಂದಿ ಮತ್ತು ವಿಪತ್ತು ನಿರ್ವಹಣಾ ತಂಡಗಳು ಸ್ಥಳಕ್ಕೆ ಧಾವಿಸಿ ಭಾರೀ ಮಳೆಯ ನಡುವೆ ಹಗ್ಗಗಳನ್ನು ಬಳಸಿ ಗಾಯಾಳುಗಳು ಮತ್ತು ದೇಹಗಳನ್ನು ಹೊರತೆಗೆದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಮತ್ತು ಗುರುತಿಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳನ್ನು ಖಾಸಗಿ ಆಂಬ್ಯುಲೆನ್ಸ್‌ಗಳಲ್ಲಿ ಘೋಟಿ ಗ್ರಾಮದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read