ನೇಣು ಹಾಕಿಕೊಂಡು ಪತಿ ಆತ್ಮಹತ್ಯೆ: ತಡೆಯುವ ಬದಲು ವಿಡಿಯೋ ಮಾಡಿದ ಪತ್ನಿ…!

ಥಾಣೆ: ಪತಿ ಆತ್ಮಹತ್ಯೆ ಮಾಡಿಕೊಳ್ಳುವಾಗ ತಡೆಯುವ ಬದಲು ಪತ್ನಿ ವಿಡಿಯೋ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

ನಗರದ ಮಹಿಳೆಯೊಬ್ಬರು ಪತಿಯನ್ನು ತಡೆಯುವ ಬದಲು ವಿಡಿಯೋ ಮಾಡಿ ಪತಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಕೇಳಿಬಂದಿದೆ. 29ರ ಹರೆಯದ ಯುವತಿ ವಿರುದ್ಧ ಥಾಣೆಯಲ್ಲಿ ಪತಿಯ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಾಗ್ಲೆ ಎಸ್ಟೇಟ್‌ನಲ್ಲಿ ವಾಸಿಸುವ ದಂಪತಿಗಳು ವಿವಿಧ ವಿಷಯಗಳಿಗೆ ಆಗಾಗ್ಗೆ ಜಗಳವಾಡುತ್ತಿದ್ದರು. ನವೆಂಬರ್ 20 ರಂದು ಈ ಘಟನೆ ನಡೆದಿದ್ದು, 29 ವರ್ಷ ವಯಸ್ಸಿನ ವ್ಯಕ್ತಿ ತನ್ನ ಮನೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವಾಗ್ಲೆ ಎಸ್ಟೇಟ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಘಟನೆ ನಡೆದಾಗ ಆತನ ಪತ್ನಿ ಅಲ್ಲಿಯೇ ಇದ್ದಳು ಮತ್ತು ವ್ಯಕ್ತಿ ನೇಣು ಹಾಕಿಕೊಂಡಾಗ ಇಡೀ ಘಟನೆಯನ್ನು ಕ್ಯಾಮೆರಾದಲ್ಲಿ ದಾಖಲಿಸಿದ್ದಾರೆ. ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಸಂತ್ರಸ್ತೆಯ ತಾಯಿ ಶುಕ್ರವಾರ ಪೊಲೀಸರಿಗೆ ದೂರು ನೀಡಿದ್ದು, ಮೃತನ ಪತ್ನಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 105(ಕೊಲೆಯಲ್ಲದ ಅಪರಾಧಿ ನರಹತ್ಯೆಗೆ ಶಿಕ್ಷೆ) ಮತ್ತು 108(ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read