BIG NEWS: 12 ಗಂಟೆಗಳಲ್ಲಿ 17 ರೋಗಿಗಳ ಸಾವು; ಮಹಾ ಸರ್ಕಾರಿ ಆಸ್ಪತ್ರೆಯಲ್ಲಿ ಮರಣ ಮೃದಂಗ; ಆಡಳಿತ ಮಂಡಳಿ ವಿರುದ್ಧ ಜನಾಕ್ರೋಶ

ಥಾಣೆ: ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳ ಮರಣ ಮೃದಂಗ ನಡೆದಿದೆ. ಕೇವಲ 12 ಗಂಟೆಯಲ್ಲಿ 17 ರೋಗಿಗಳು ಸಾವನ್ನಪ್ಪಿದ್ದು, ಆಸ್ಪತ್ರೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಥಾಣೆಯ ಕಲ್ವಾದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜ್ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದೆ. ಕಳೆದ 12 ಗಂಟೆಯಲ್ಲಿ 17 ರೋಗಿಗಳು ನಾನಾ ಕಾರಣಗಳಿಂದ ಸಾವನ್ನಪ್ಪಿದ್ದಾರೆ.

ತೀವ್ರ ನಿಗಾ ಘಟಕದಲ್ಲಿದ್ದ 12 ರೋಗಿಗಳು ಹಾಗೂ ಇತರ ವಿಭಾಗದ 5 ರೋಗಿಗಳು ಸಾವನ್ನಪ್ಪಿದ್ದಾರೆ. ಇದು ಆಸ್ಪತ್ರೆಯ ಚಿಕಿತ್ಸಾ ವ್ಯವಸ್ಥೆಯ ಮೇಲೆಯೇ ಅನುಮಾನ ಮೂಡಿಸಿದೆ. ಆಸ್ಪತ್ರೆಯ ಆಡಳಿತ ಮಂಡಳಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆ, ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳ ಕೂಡ ಈ ಸಾವಿಗೆ ಕಾರಣ ಎಂದು ಹೇಳಲಾಗುತ್ತಿದೆ. ಥಾಣೆಯಲ್ಲಿನ ಜಿಲ್ಲಾಸ್ಪತ್ರೆ ಮುಚ್ಚಲಾಗಿರುವುದರಿಂದ ಎಲ್ಲಾ ರೋಗಿಗಳು ಇದೇ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಇದರಿಂದಾಗಿ ವೈದರು, ವೈದ್ಯಕೀಯ ಉಪಕರಣಗಳ ಕೊರತೆ ಎದುರಾಗಿದೆ. ಆಗಸ್ಟ್ 5ರಂದು ಒಂದೇ ದಿನ ಐವರು ರೋಗಿಗಳು ಸಾವನ್ನಪ್ಪಿದ್ದರು. ಇದೀಗ ಒಂದೇ ದಿನದಲ್ಲಿ 17 ರೋಗಿಗಳು ಸಾವನ್ನಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read