HomeKarnatakaRain Alert Karnataka : ಆಗಸ್ಟ್ 1 ರವರೆಗೆ ರಾಜ್ಯದಲ್ಲಿ ಭಾರಿ ಮಳೆ ;...

Rain Alert Karnataka : ಆಗಸ್ಟ್ 1 ರವರೆಗೆ ರಾಜ್ಯದಲ್ಲಿ ಭಾರಿ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ.!

ಬೆಂಗಳೂರು : ಆ. 1ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜು. 16ರಿಂದ ಆಗಸ್ಟ್ 1ರವರೆಗೆ ರಾಜ್ಯದಲ್ಲಿ ಮತ್ತಷ್ಟು ಮಳೆ ಸುರಿಯಲಿದೆ ಎಂದು ಕರ್ನಾಟಕ ರಾಜ್ಯ ಪ್ರಾಕೃತಿಕ ವಿಕೋಪ ನಿರ್ವಹಣಾ ಕೇಂದ್ರ ತಿಳಿಸಿದೆ

ಜು. 16ರಿಂದ 24ರವರೆಗೆ ಕರಾವಳಿಯಲ್ಲಿ ಹಾಗೂ ಮಲೆನಾಡಿನ ಭಾಗದಲ್ಲಿ ಭಾರಿ ಮಳೆಯಾಗಲಿದೆ. ಜು. 24ರಿಂದ ಆ. 1ರ ನಡುವೆ, ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿಕ್ಕಮಗಳೂರಿನ ಮೂಡಿಗೆರೆ, ಶೃಂಗೇರಿ, ಕೊಪ್ಪ, ಕಳಸ, ನರಸಿಂಹರಾಜಪುರ, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಸಾಗರ, ಹೊಸನಗರ, ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸೇರಿ ಹಲವು ಕಡೆ ಜು. 16ರಿಂದ 24ರವರೆಗಿನ ಅವಧಿಯಲ್ಲಿ 150 ಮಿ.ಮೀ.ನಷ್ಟು ಮಳೆಯಾಗಬಹುದು ಎಂದು ಪ್ರಾಕೃತಿಕ ವಿಕೋಪ ನಿರ್ವಹಣಾ ಕೇಂದ್ರ ತಿಳಿಸಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular