HomeKarnatakaಆ. 27ರಂದು 384 ‘KAS’ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ: ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿಯಲ್ಲಿ...

ಆ. 27ರಂದು 384 ‘KAS’ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ: ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿಯಲ್ಲಿ ‘ನಿಷೇಧಾಜ್ಞೆ’ ಜಾರಿ.!

ಬೆಂಗಳೂರು : ಆ.27 ರಂದು ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’, ‘ಬಿ’ ವೃಂದದ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಆ.27 ರಂದು ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರ ಸುತ್ತಲೂ 200 ಮೀಟರ್ ಒಳಗಿನ ಆವರಣವನ್ನು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರ ಮೇರೆಗೆ ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಬಳ್ಳಾರಿ ಜಿಲ್ಲಾ ದಂಡಾಧಿಕಾರಿಯಾಗಿರುವ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.

ಆ.27 ರಂದು ನಗರದ 15 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ಮಧ್ಯಾಹ್ನ 02 ಗಂಟೆಯಿAದ ಸಂಜೆ 04 ಗಂಟೆಯವರೆಗೆ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್, ಇಂಟರ್ನೆಟ್ ಸೆಂಟರ್ಗಳು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲು ಆದೇಶಿಸಿದ್ದು, ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ.ಈ ಆದೇಶವು ಪರೀಕ್ಷಾ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular